ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಮಪತ್ರ ಸಲ್ಲಿಸಿದ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳು

ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ
Last Updated 14 ಅಕ್ಟೋಬರ್ 2020, 19:31 IST
ಅಕ್ಷರ ಗಾತ್ರ

ಶಿರಾ (ತುಮಕೂರು): ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬುಧವಾರ ಬಿಜೆಪಿ ಮತ್ತು ಜೆಡಿಎಸ್‌ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರ ಗೈರು ಹಾಜರಿಯಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ, ಶಾಸಕ ಎಚ್.ಡಿ.ರೇವಣ್ಣ, ಮುಖಂಡ ಆರ್. ರಾಮು ಅವರು ಚುನಾವಣಾಧಿಕಾರಿ ಡಾ.ನಂದಿನಿದೇವಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಜೆಡಿಎಸ್ ಕಚೇರಿಯಿ‌ಂದ ಮಿನಿ ವಿಧಾನಸೌಧದವರೆಗೆ ಮೆರವಣಿಗೆಯಲ್ಲಿ ತೆರಳಿದ ಸಾವಿರಾರು ಜೆಡಿಎಸ್ ಕಾರ್ಯಕರ್ತರು ನಾಮಪತ್ರ ಸಲ್ಲಿಕೆಗೆ ಸಾಕ್ಷಿಯಾದರು.

ಸಂಸದ ಪ್ರಜ್ವಲ್ ರೇವಣ್ಣ, ಶಾಸಕರಾದ ವೀರಭದ್ರಯ್ಯ, ಗೌರಿಶಂಕರ್, ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಆರ್.ಉಗ್ರೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ರಾಮಕೃಷ್ಣ, ಸಿ.ಆರ್.ಉಮೇಶ್, ಸತ್ಯಪ್ರಕಾಶ್ ಭಾಗವಹಿಸಿದ್ದರು.

ಬಿಜೆಪಿ ನಾಮಪತ್ರ: ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಅವರು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಬಿಜೆಪಿ ನಗರ ಮೋರ್ಚಾ ಅಧ್ಯಕ್ಷ ವಿಜಯರಾಜು ಅವರ ಜತೆ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಸಂಸದ ಎ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ, ತುಮುಲ್ ನಿರ್ದೇಶಕ ಎಸ್.ಆರ್.ಗೌಡ ಹಾಜರಿದ್ದರು. ರಾಜೇಶ್ ಗೌಡ ಅವರು ಅ.16ರಂದು ಎರಡನೇ ಬಾರಿ ರಾಜ್ಯ ಮಟ್ಟದ ನಾಯಕರ ಜೊತೆಯಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

ಮುಖಂಡರ ಗೈರು

ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಡಾ.ಸಿ.ಎಂ. ರಾಜೇಶ್ ಗೌಡ ಅವರಿಗೆ ಟಿಕೆಟ್ ಘೋಷಣೆಯಾಗಿದ್ದರೂ ಗೊಂದಲ ಮುಂದುವರೆದಿದ್ದು, ಕಾರ್ಯಕರ್ತರಲ್ಲಿ ಆತಂಕ ಹೆಚ್ಚಿಸಿದೆ.

ಬಿಜೆಪಿಯಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಬಿ.ಕೆ.ಮಂಜುನಾಥ್ಅವರು ಸಿ.ಎಂ.ರಾಜೇಶ್ ಗೌಡ ನಾಮಪತ್ರ ಸಲ್ಲಿಸುವ ಸಮಯದಲ್ಲಿ ಗೈರಾಗಿದ್ದರು.

ಉಪಚುನಾವಣೆಯಲ್ಲಿ ಟಿಕೆಟ್‌ ಸಿಗದಿರುವುದರಿಂದ ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಅವರ ಆಪ್ತರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT