ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಡಿ. ಪ್ರಕರಣ: ಸಂತ್ರಸ್ತೆ ಸಮ್ಮುಖದಲ್ಲಿ ಮಹಜರು ಪ್ರಕ್ರಿಯೆ ಆರಂಭ

Last Updated 1 ಏಪ್ರಿಲ್ 2021, 9:11 IST
ಅಕ್ಷರ ಗಾತ್ರ

ಬೆಂಗಳೂರು: ಸಿ.ಡಿ. ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗಿ ‘ರಮೇಶ ಜಾರಕಿಹೊಳಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ’ ಎಂದು ಸ್ವ-ಇಚ್ಛಾ ಹೇಳಿಕೆ ನೀಡಿರುವ ಸಂತ್ರಸ್ತೆಯ ಸಮ್ಮುಖದಲ್ಲಿ ತನಿಖಾಧಿಕಾರಿಯವರು ಮಹಜರು ಪ್ರಕ್ರಿಯೆ ಆರಂಭಿಸಿದ್ದಾರೆ.

ಸಿಆರ್‌ಪಿಸಿ 164ರಡಿ ಸಂತ್ರಸ್ತೆ ನೀಡಲಾದ ಹೇಳಿಕೆ ಆಧರಿಸಿ ತನಿಖೆ ಮುಂದುವರಿದಿದೆ. ಬುಧವಾರ ಯುವತಿಯಿಂದಲೂ ತನಿಖಾಧಿಕಾರಿ ಹೇಳಿಕೆ ಪಡೆದು, ಅದಕ್ಕೆ ಸಂಬಂಧಪಟ್ಟ ಪುರಾವೆಗಳನ್ನೂ ಸಂಗ್ರಹಿಸಿದ್ದಾರೆ.

ಗುರುವಾರ ಬೆಳಿಗ್ಗೆಯಿಂದ ಸಂತ್ರಸ್ತೆಯನ್ನು ಕರೆದುಕೊಂಡು ತನಿಖಾಧಿಕಾರಿಯೂ ಆಗಿರುವ ಎಸಿಪಿ ಎಂ.ಸಿ. ಕವಿತಾ ಅವರು ನಗರದಲ್ಲಿ ಸುತ್ತಾಡುತ್ತಿದ್ದಾರೆ.

ಸಂತ್ರಸ್ತೆ ವಾಸವಿದ್ದ ಆರ್.ಟಿ. ನಗರದ ಕೊಠಡಿ ಹಾಗೂ ಅಕ್ಕ-ಪಕ್ಕದಲ್ಲಿ ಓಡಾಡಿದ್ದ ಹೋಟೆಲ್‌ನಲ್ಲಿ ಮಹಜರು ನಡೆಸಲಾಗುತ್ತಿದೆ.
ಕೊಠಡಿಗೆ ಯಾರೆಲ್ಲ ? ಯಾವಾಗೆಲ್ಲ ಬಂದಿದ್ದರು? ಅವರು ಎಲ್ಲಿ ಕುಳಿತುಕೊಂಡಿದ್ದರು? ಹೀಗೆಲ್ಲ ಹಲವು‌ ಮಾಹಿತಿಯನ್ನು ಮಹಜರು ಪ್ರಕ್ರಿಯೆಯಲ್ಲಿ ಫೋಟೊ ಸಮೇತ ದಾಖಲಿಸಿಕೊಳ್ಳಲಾಗುತ್ತಿದೆ.

ಕೊಠಡಿ ನಂತರ, ಮಲ್ಲೇಶ್ವರಕ್ಕೆ ತೆರಳಲಿರುವ ತಂಡ ಅಲ್ಲಿಯೂ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಮಹಜರು ನಡೆಸಲಿದೆ.
ಸಂತ್ರಸ್ತೆ ಹಾಗೂ ತನಿಖಾ ತಂಡಕ್ಕೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಬೆಂಗಾವಲು ವಾಹನದೊಂದಿಗೆ ತನಿಖಾ ತಂಡ ಸಂಚರಿಸುತ್ತಿದೆ. ಮಹಜರು ನಡೆಯುವ ಸ್ಥಳದಲ್ಲಿ ಸಾರ್ವಜನಿಕರ‌ ಓಡಾಟ ನಿರ್ಬಂಧಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT