ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತ ಉದ್ದಿಮೆದಾರರಿಗೆ ಮೀಸಲಾತಿ ಪ್ರಕಾರ ಕೈಗಾರಿಕಾ ನಿವೇಶನ: ಸಿಎಂ ಬೊಮ್ಮಾಯಿ

Last Updated 29 ಅಕ್ಟೋಬರ್ 2022, 21:15 IST
ಅಕ್ಷರ ಗಾತ್ರ

ಬೆಂಗಳೂರು: ಕೈಗಾರಿಕಾ ನಿವೇಶನ ಹಂಚಿಕೆಯಲ್ಲಿ ದಲಿತ ಉದ್ದಿಮೆದಾರರಿಗೆ ಮೀಸಲಾತಿ ನೀಡುವ ಕುರಿತು 2009ರಲ್ಲಿ ನಿಗದಿಪಡಿಸಲಾದ ಮಾನದಂಡದಂತೆ ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ಕಾರ್ಯಾಧ್ಯಕ್ಷ ಸಿ.ಜಿ. ಶ್ರೀನಿವಾಸನ್ ನೇತೃತ್ವದ ನಿಯೋಗದ ಜತೆ ಸಭೆ ನಡೆಸಿದ ಅವರು ಈ ವಿಷಯ ತಿಳಿಸಿದರು.

ನಿವೇಶನ ಹಂಚಿಕೆಗಾಗಿ ಕೈಗಾರಿಕಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹಾಗೂ ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಜೊತೆಯಾಗಿ ‘ಲ್ಯಾಂಡ್ ಆಡಿಟ್‌’ ನಡೆಸಿ ವರದಿ ಸಲ್ಲಿಸಲಿದ್ದಾರೆ. ಅದಾದ ಬಳಿಕ, ಮೀಸಲಾತಿ ಅನ್ವಯ ಹಂಚಿಕೆಯಾಗಬೇಕಾದ ನಿವೇಶನಗಳನ್ನು ಕಾಲಮಿತಿಯಲ್ಲಿ ನೀಡಲಾಗುವುದು ಎಂದು ಹೇಳಿದರು.

‘ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಕೈಗಾರಿಕಾ ನಿವೇಶನವನ್ನು ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿಯಲ್ಲಿಶೇ 60 ರಷ್ಟು ಹಾಗೂ ರಾಜ್ಯಮಟ್ಟದ ಸಮಿತಿಯಲ್ಲಿ ಶೇ. 40 ರಷ್ಟು ಹಂಚಿಕೆ ಮಾಡಲಾಗುತ್ತಿದೆ. ಆದರೆ ದಲಿತ ಉದ್ದಿಮೆದಾರರಲ್ಲಿ ಬಹುತೇಕ ಮಂದಿಯ ಯೋಜನಾ ವೆಚ್ಚ ₹15 ಕೋಟಿಗಿಂತ ಕಡಿಮೆ ಇರುವುದರಿಂದ ಜಿಲ್ಲಾ ಮಟ್ಟದಲ್ಲಿನ ಹಂಚಿಕೆಯ ಪ್ರಮಾಣವನ್ನು ಹೆಚ್ಚಿಸಬೇಕು’ ಎಂದು ಸಂಘ ಮನವಿ ಮಾಡಿತು.

ಇದಕ್ಕೆ ಸ್ಪಂದಿಸಿದ ಬೊಮ್ಮಾಯಿ, ಜಿಲ್ಲಾಮಟ್ಟದಲ್ಲಿ ಶೇಕಡ 70ರಷ್ಟು ಹಾಗೂ ರಾಜ್ಯಮಟ್ಟದಲ್ಲಿಶೇಕಡ 30ರಷ್ಟು ಹಂಚಿಕೆ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT