ರಾಜ್ಯದಾದ್ಯಂತ ಇಂದಿನಿಂದ 6ರಿಂದ 8ರವರೆಗೆ ಭೌತಿಕ ತರಗತಿ ಆರಂಭ

ಬೆಂಗಳೂರು: ರಾಜ್ಯದಾದ್ಯಂತ ಶಾಲೆಗಳಲ್ಲಿ 6ರಿಂದ 8ರವರೆಗಿನ ಭೌತಿಕ ತರಗತಿ ಸೋಮವಾರದಿಂದ (ಸೆ. 6) ಆರಂಭಗೊಳ್ಳಲಿದೆ.
ಕೋವಿಡ್ ಮುನ್ನೆಚ್ಚರಿಕೆ ಕ್ರಮ ವಹಿಸಿಕೊಂಡು, ಎಸ್‌ಒಪಿ (ಪ್ರಮಾಣಿತ ಕಾರ್ಯಾಚರಣಾ ವಿಧಾನ) ಪಾಲಿಸಿ ತರಗತಿಗಳನ್ನು ಆರಂಭಿಸುವಂತೆ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಪ್ರತಿಕ್ರಿಯಿಸಿ, ‘ಶಾಲೆ ಆರಂಭಿಸುವ ಬಗ್ಗೆ ಪೋಷಕರ ಸಭೆ ನಡೆಸಿದ್ದೇವೆ. ಆದರೆ, ಹೆಚ್ಚಿನ ಪೋಷಕರು ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ಮುಂದುವರಿಸುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ’ ಎಂದರು.
ಶಾಲೆಗಳಲ್ಲಿ ಭೌತಿಕ ತರಗತಿಗಳು ಆರಂಭವಾಗುತ್ತಿರುವ ಕಾರಣ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಬೆಂಗಳೂರಿನ ಜೆ.ಬಿ. ನಗರದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ (ಕೆಪಿಎಸ್) ಸೋಮವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.