ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಪ್ರವೇಶಕ್ಕೆ ಆರು ವರ್ಷ: 2025–26ಕ್ಕೆ ಜಾರಿ

Last Updated 13 ಅಕ್ಟೋಬರ್ 2022, 19:56 IST
ಅಕ್ಷರ ಗಾತ್ರ

ಬೆಂಗಳೂರು: ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ 6 ವರ್ಷಗಳು ಪೂರ್ಣಗೊಂಡಿರಬೇಕು. ಈ ನಿಯಮವನ್ನು 2025–26ರಿಂದ ಜಾರಿಗೊಳಿಸುವ ಚಿಂತನೆ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್‌ ಹೇಳಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಶಾಲಾ ಶಿಕ್ಷಣಕ್ಕೆ ಮಗು ಪ್ರವೇಶ ಪಡೆಯಲು 6 ವರ್ಷಗಳು ಪೂರ್ಣಗೊಂಡಿರುವುದು ಕಡ್ಡಾಯ. ಶಿಕ್ಷಣ ತಜ್ಞರ ಸಲಹೆಯೂ ಅದೇ ಆಗಿದೆ. 23 ರಾಜ್ಯಗಳು ಈಗಾಗಲೇ ನಿಯಮ ಅಳವಡಿಸಿಕೊಂಡಿವೆ. ರಾಜ್ಯದಲ್ಲೂ ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಅಳವಡಿಸಿಕೊಳ್ಳಲಾಗುವುದು. ಆ ಮಕ್ಕಳು ಎರಡು ವರ್ಷಗಳ ನಂತರ (2025–26) ಒಂದನೇ ತರಗತಿಗೆ ಪ್ರವೇಶ ಪಡೆಯಲು ಅನುಕೂಲವಾಗುತ್ತದೆ ಎಂದರು.

ಕೋವಿಡ್‌ ನಂತರದ ದಿನಗಳಲ್ಲಿ ಬಹಳಷ್ಟು ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಅವರ ಕಲಿಕಾ ಮಟ್ಟ ಮೌಲ್ಯಮಾಪನ ಮಾಡಲು, ಕಲಿಕೆಯ ಸಾಮರ್ಥ್ಯ ವೃದ್ಧಿಸಲು 5 ಮತ್ತು 8ನೇ ತರಗತಿಗಳಿಗೆ ಸಾಮಾನ್ಯ ಪರೀಕ್ಷೆ ನಡೆಸುವ ಚಿಂತನೆ ಇದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT