ಸೋಮವಾರ, ಅಕ್ಟೋಬರ್ 25, 2021
25 °C

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿ ಎಸ್.ಕೆ.ಹಾಲ್ದಾರ್ ಮುಂದುವರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಜಲ ಆಯೋಗದ ಅಧ್ಯಕ್ಷ ಸೌಮಿತ್ರ ಕುಮಾರ್ ಹಾಲ್ದಾರ್ ಅವರನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ 5 ವರ್ಷಗಳ ಅವಧಿಗೆ ಮುಂದುವರಿಸಲು ಕೇಂದ್ರದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಕೇಂದ್ರ ಜಲ ಆಯೋಗದ ಅಧ್ಯಕ್ಷರನ್ನೇ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಇದುವರೆಗೆ ನೇಮಿಸಲಾಗಿತ್ತು.

ನವೆಂಬರ್ 30ರಂದು ಸೇವೆಯಿಂದ ನಿವೃತ್ತರಾಗಲಿರುವ ಹಾಲ್ದಾರ್ ಅವರನ್ನು ಪ್ರಾಧಿಕಾರದ ಅಧ್ಯಕ್ಷತೆಗೆ ನೇಮಕ ಮಾಡಲಾಗಿದೆ. ನಿವೃತ್ತಿಯ ನಂತರ ಹಾಲ್ದಾರ್ ಅವರು ಗುತ್ತಿಗೆ ಆಧಾರದ ಮೇಲೆ ಸೇವೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಕೇಂದ್ರದ ಪ್ರಕಟಣೆ ತಿಳಿಸಿದೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು