ಬುಧವಾರ, ಸೆಪ್ಟೆಂಬರ್ 22, 2021
24 °C

ಸ್ಮಾರ್ಟ್ ಸಿಟಿ: 6ನೇ ಸ್ಥಾನದಲ್ಲಿ ಕರ್ನಾಟಕ: ಬೈರತಿ ಬಸವರಾಜ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ದೇಶದಲ್ಲಿ 6ನೇ ಸ್ಥಾನದಲ್ಲಿರುವ ಕರ್ನಾಟಕ, ಮುಂದಿನ ದಿನಗಳಲ್ಲಿ ಮೊದಲ ಸ್ಥಾನ ಪಡೆಯಬೇಕು. ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದ ಉಸ್ತುವಾರಿ ವಹಿಸಿರುವ ವ್ಯವಸ್ಥಾಪಕ ನಿರ್ದೇಶಕರಿಗೆ ಬೈರತಿ ಬಸವರಾಜ ಸೂಚಿಸಿದರು. 

ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಇಂದಿರಾ ನಗರದಲ್ಲಿರುವ ಕೆಯುಐಡಿಎಫ್‌ಸಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಅವರು ನಡೆಸಿದರು.

ರಾಜ್ಯದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ 2019-20ನೇ ಸಾಲಿನಲ್ಲಿ ₹ 700 ಕೋಟಿ, 2020-21ನೇ ಸಾಲಿನಲ್ಲಿ ₹ 1,300 ಕೋಟಿ ಮತ್ತು 2021-2ನೇ ಸಾಲಿನಲ್ಲಿ ಈವರೆಗೆ ₹ 537 ಕೋಟಿ ವೆಚ್ಚ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ದಾವಣಗೆರೆ, ಶಿವಮೊಗ್ಗ, ತುಮಕೂರು, ಮಂಗಳೂರು, ಹುಬ್ಬಳ್ಳಿ–ಧಾರವಾಡ ಸ್ಮಾರ್ಟ್ ಸಿಟಿ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರು ಸಭೆಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು