ರಾಮನಗರ: ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿ ಅವರ ರಾಜೀನಾಮೆಗೆ ಕಾರಣರಾದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಕನಕಪುರ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದವರು.

ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷರೂ ಆಗಿರುವ ದಿನೇಶ್ ಈ ಹಿಂದೆಯೂ ಇಂತಹ ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ಹಲವು ಪ್ರಭಾವಿ ವ್ಯಕ್ತಿಗಳ ವಿರುದ್ಧ ಕಾನೂನು ಸಮರ ನಡೆಸುತ್ತಿದ್ದಾರೆ. ತೋಟಗಾರಿಕೆ ಸಚಿವ ನಾರಾಯಣ ಗೌಡ ತಮ್ಮ ಚುನಾವಣಾ ಅಫಿಡವಿಟ್ಗಳಲ್ಲಿ ಆಸ್ತಿ ವಿವರ ತಪ್ಪಾಗಿ ನೀಡಿದ್ದು, ಅವರ ವಿರುದ್ಧ ಲೋಕಾಯುಕ್ತ ತನಿಖೆ ನಡೆಸಬೇಕು ಎಂದು ಕೋರಿ ದಿನೇಶ್ ಈಚೆಗೆ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದಕ್ಕೆ ರಾಜ್ಯಪಾಲರು ಅನುಮತಿಯನ್ನೂ ನೀಡಿದ್ದರು. ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಈ ಹಿಂದೆ ಡಿ.ಕೆ. ಶಿವಕುಮಾರ್ ವಿರುದ್ಧವೂ ದಿನೇಶ್ ಹೋರಾಟ ನಡೆಸಿದ್ದರು.

ಪತ್ರಿಕೋದ್ಯಮ ಪದವೀಧರರಾಗಿರುವ ಅವರು ಕೆಲ ಕಾಲ ವಾರಪತ್ರಿಕೆಗಳ ವರದಿಗಾರರಾಗಿ ಕೆಲಸ
ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.