ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮಣ್ಣ ನಮ್ಮ ಜೊತೆಯೇ ಇರುತ್ತಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Last Updated 13 ಮಾರ್ಚ್ 2023, 6:41 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ಸಚಿವ ವಿ. ಸೋಮಣ್ಣ ನಮ್ಮ ಜೊತೆನೆ ಇದ್ದಾರೆ. ಮುಂದೆಯೂ ಜೊತೆಗೇ ಇರುತ್ತಾರೆ. ಯಾವುದೇ ಊಹಾಪೋಹ ಬೇಡ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ವಿ. ಸೋಮಣ್ಣ ಅವರ ಜೊತೆ ನಿನ್ನೆ ಹುಬ್ಬಳ್ಳಿಯಲ್ಲಿ ಯಾವುದೇ ಮಾತುಕತೆ ನಡೆದಿಲ್ಲ. ನಮ್ಮ ಭೇಟಿ ಕೇವಲ ಔಪಚಾರಿಕ' ಎಂದರು.

'ಒಂದಿಷ್ಟು ಯೋಜನೆಗಳ ಕ್ರೆಡಿಟ್ ಪಡೆಯಲು ಕೆಲವರು ಮುಂದಾಗಿದ್ದಾರೆ. ಕ್ರೆಡಿಟ್ ವಾರ್ ಸಹಜ. ಪಕ್ಕದ ಮನೆಯವರು ಗಂಡು ಹಡೆದರೆ, ಇವರು ಸಿಹಿ ಹಂಚುತ್ತಾರೆ' ಎಂದು ವಿರೋಧ ಪಕ್ಷಗಳಿಗೆ ಬೊಮ್ಮಾಯಿ ಟಾಂಗ್ ನೀಡಿದರು.

'ಬಿಜೆಪಿಗೆ ಮೋದಿ ದೇವರು' ಎನ್ನುವ ಕಾಂಗ್ರೆಸ್ ಟೀಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, 'ನಾವು ಮೋದಿ ಅವರನ್ನು ಎಂದಿಗೂ ದೇವರು ಅಂದಿಲ್ಲ. ಅವರು ಸಹ ತಮ್ಮನ್ನು ದೇವರು ಅಂದುಕೊಂಡಿಲ್ಲ. ಅವರೊಬ್ಬ ಮಹಾನ್ ನಾಯಕ. ಅತ್ಯಂತ ಕಷ್ಟ ಕಾಲದಲ್ಲಿ ಗಡಿಯಲ್ಲಿ ಭದ್ರತೆ ಮತ್ತು ಆಂತರಿಕ ಸುರಕ್ಷತೆ ಸುಭದ್ರತೆ ಹೆಚ್ಚಿಸಿದ ಆಪತ್ಬಾಂಧವ' ಎಂದು ಹೇಳಿದರು.

'ರಾಜ್ಯದಲ್ಲಿ ಮೋದಿ ಸುನಾಮಿ ಎದ್ದಿದೆ. ಅವರು ರಾಜ್ಯದ ಹಲವೆಡೆ ಪ್ರಚಾರ ಮಾಡಿರುವುದರಿಂದ ಬಿಜೆಪಿ ಪರ ಒಲವು ಹೆಚ್ಚಾಗಿದೆ' ಎಂದರು.

ಹೆಸ್ಕಾಂ ಮತ್ತು ಕೆಪಿಟಿಸಿಎಲ್ ಮುಷ್ಕರ ಕುರಿತು ಮಾತನಾಡಿದ ಅವರು, 'ಇಂಧನ ಸಚಿವರು ನೌಕರರ ಸಂಘ‌ ಮತ್ತು ಒಕ್ಕೂಟದ ಸಂಪರ್ಕದಲ್ಲಿದ್ದು, ಈಗಾಗಲೇ ಎರಡು ಸುತ್ತಿನ ಮಾತುಕತೆ ನಡೆಸಿದ್ದಾರೆ. ಕೂಡಲೇ ಅವರ ಸಮಸ್ಯೆಯನ್ನು ಬಗೆಹರಿಸಲಾಗುವುದು' ಎಂದು ಭರವಸೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT