ಶನಿವಾರ, ಜುಲೈ 31, 2021
20 °C

ರಾಜ್ಯದ ವಿವಿಧೆಡೆ ಗುರುವಾರ ಸಂಜೆ ಗುಡುಗು-ಸಿಡಿಲು ಸಹಿತ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ಗುರುವಾರ ಸಂಜೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಗುರುವಾರ ಸಂಜೆ ಆಲಿಕಲ್ಲು ಮಳೆಯಾಗಿದೆ. ಜಿಲ್ಲೆಯ  ಸಿರುಗುಪ್ಪ ನಗರದಲ್ಲಿ ಸಂಜೆ  ಆಲಿಕಲ್ಲು ಗಾಳಿ ಸಮೇತ 15 ನಿಮಿಷಗಳ ಕಾಲ ಮಳೆ ಸುರಿಯಿತು. ಕೂಡ್ಲಿಗಿ ಮತ್ತು ಸಂಡೂರಿನಲ್ಲೂ ಮಳೆಯಾಯಿತು.

ಹುಬ್ಬಳ್ಳಿಯಲ್ಲಿ ಕೂಡ ಸಂಜೆಯಾಗುತ್ತಿದ್ದಂತೆ ಜೋರು ಮಳೆ ಆರಂಭವಾಗಿದೆ.

ಸಂಡೂರು ತಾಲ್ಲೂಕಿನ ಡಿ. ಮಲ್ಲಾಪುರ ಗ್ರಾಮದ ಜಮೀನಿನಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟಿದೆ.

ಬೆಳಗಾವಿ ನಗರವೂ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಮತ್ತು ಹುಕ್ಕೇರಿ, ಗೋಕಾಕ, ಚಿಕ್ಕೋಡಿ, ಎಂ.ಕೆ. ಹುಬ್ಬಳ್ಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ.

ಉಳಿದಂತೆ ಚಿಕ್ಕಮಗಳೂರು, ಕಲಬರ್ಗಿಯಲ್ಲೂ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು