ಬುಧವಾರ, ಆಗಸ್ಟ್ 17, 2022
25 °C

ಪೋಷಕರು ಪಬ್ಜಿ ಆಡಬೇಡ ಎಂದಿದ್ದಕ್ಕೆ ಮಗ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಪಬ್ಜಿ ಆಟವನ್ನು ಆಡಬೇಡ ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹಾವೇರಿ ಜಿಲ್ಲೆಯ ಸಂಗೂರ ಗ್ರಾಮದ ತೇಜಸ್ ಸಿಡ್ಲಾಪುರ (17) ಎಂಬ ಯುವಕ ಮೃತಪಟ್ಟವ. 

ಪಬ್ಜಿ ಆಡಬೇಡ ಎಂದು ಸಾಕಷ್ಟು ಸಲ ಹೇಳಿದರೂ ಕೇಳಿರಲಿಲ್ಲ. ಆದ್ದರಿಂದ ಪೋಷಕರು ಇಂಟರ್ನೆಟ್ ಹಾಕಿಸಿರಲಿಲ್ಲ. ಇದರಿಂದ ಬೇಸತ್ತ ಯುವಕ ತೋಟದ ಮನೆಗೆ ಹೋಗಿ ಬೆಳೆಗಳಿಗೆ ಸಿಂಪಡಿಸುವ ರಾಸಾಯನಿಕ ಔಷಧ ಕುಡಿದಿದ್ದ. ಆತನನ್ನು ಆ. 31 ರಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆತ ಗುರುವಾರ ಮೃತಪಟ್ಟಿದ್ದಾನೆ ಎಂದು ಕಿಮ್ಸ್ ವೈದ್ಯರು ತಿಳಿಸಿದ್ದಾರೆ.

ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು