ಸೋಮವಾರ, ಮಾರ್ಚ್ 8, 2021
27 °C

ತುಂಗಾ ಕಾಲುವೆಗೆ ಕಾರು ಉರುಳಿ ಗ್ರಾಮ ಪಂಚಾಯಿತಿ ಅಭ್ಯರ್ಥಿಯ ಪುತ್ರನಿಗೆ ತೀವ್ರ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ತುಂಗಾ ಎಡದಂಡೆ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಾಲ್ಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.

ಹಾವೇರಿ ತಾಲ್ಲೂಕಿನ ನೆಗಳೂರು ಗ್ರಾಮದ ಸಿದ್ದನಗೌಡ ಬಿಷ್ಟನಗೌಡರ (45)  ಮೃತರು. 

ಹಾವೇರಿಯಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯ್ತಿ ಮತ ಎಣಿಕೆ ಹಿನ್ನೆಲೆಯಲ್ಲಿ ಕನವಳ್ಳಿ ಪರಮೇಶ್ವರ ದೇವಾಲಯದಲ್ಲಿ ಪೂಜೆ ಮಾಡಿಸಿಕೊಂಡು ಹಾವೇರಿಗೆ ಬರುವ ಸಂದರ್ಭ ದುರ್ಘಟನೆ ಸಂಭವಿಸಿದೆ.

ನೆಗಳೂರ ಗ್ರಾ.ಪಂ. ಮೊದಲನೇ ವಾರ್ಡಿನ ಅಭ್ಯರ್ಥಿ ಚನ್ನಬಸಪ್ಪ ಬನ್ನಿಮಟ್ಟಿ ಅವರ ಪುತ್ರ ಪ್ರಕಾಶ ಬನ್ನಿಮಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು