ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್‌ ಜೋಡೊ ಯಾತ್ರೆ; ಪುತ್ರನೊಂದಿಗೆ ತಾಯಿಯ ಹೆಜ್ಜೆ

ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಭಾಗಿ
Last Updated 5 ಅಕ್ಟೋಬರ್ 2022, 12:54 IST
ಅಕ್ಷರ ಗಾತ್ರ

ಮಂಡ್ಯ: ಭಾರತ್‌ ಜೋಡೊ ಪಾದಯಾತ್ರೆಯಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಪಾಲ್ಗೊಳ್ಳುತ್ತಿರುವುದು ಕುತೂಹಲ ಮೂಡಿಸಿದೆ. ಗುರುವಾರಬೆಳಿಗ್ಗೆ 8.30ಕ್ಕೆ ಪಾಂಡವಪುರ ತಾಲ್ಲೂಕಿನ ಜಕ್ಕನಹಳ್ಳಿ ಕ್ರಾಸ್‌ನಿಂದ ಸೋನಿಯಾ ಗಾಂಧಿ ಅವರು ಪುತ್ರ ರಾಹುಲ್‌ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಲಿದ್ದಾರೆ.

ಆಯುಧಪೂಜೆ, ವಿಜಯದಶಮಿ ಅಂಗವಾಗಿ ಪಾದಯಾತ್ರೆಗೆ 2 ದಿನ ಬಿಡುವು ನೀಡಲಾಗಿತ್ತು. ಅ.3ರಂದೇ ರಾಜ್ಯಕ್ಕೆ ಬಂದಿದ್ದ ಸೋನಿಯಾ ಅವರು ಎಚ್.ಡಿ.ಕೋಟೆ ತಾಲ್ಲೂಕಿನ ಬೀರಂಬಳ್ಳಿ ಗ್ರಾಮದ ಆರೆಂಜ್‌ ಕೌಂಟಿ ರೆಸಾರ್ಟ್‌ನಲ್ಲಿ ಪುತ್ರನೊಂದಿಗೆ 2 ದಿನ ವಾಸ್ತವ್ಯ ಹೂಡಿದ್ದರು. ಬಿಡುವಿನ ನಂತರ ರಾಹುಲ್‌ ಗಾಂಧಿ ಗುರುವಾರ ಬೆಳಿಗ್ಗೆ 6.30ಕ್ಕೆ ಪಾಂಡವಪುರ ಸಮೀಪದ ಬೆಳ್ಳಾಳೆ ಗ್ರಾಮದ ಮೂಲಕ ಪಾದಯಾತ್ರ ಆರಂಭಿಸಲಿದ್ದಾರೆ.

ಯಾತ್ರೆಯು ಬೆಳಿಗ್ಗೆ 8.30ಕ್ಕೆ ಮೇಲುಕೋಟೆ ಸಮೀಪದ ಜಕ್ಕನಹಳ್ಳಿ ಕ್ರಾಸ್‌ ತಲುಪಲಿದೆ. ಹೊನ್ನೆಮಡು ಗ್ರಾಮದ ಬಳಿಯ ಹೆಲಿಪ್ಯಾಡ್‌ಗೆ ಬಂದಿಳಿಯುವ ಸೋನಿಯಾ ಗಾಂಧಿ ಜಕ್ಕನಹಳ್ಳಿ ಕ್ರಾಸ್‌ನಲ್ಲಿ ಪಾದಯಾತ್ರೆ ಸೇರಿಕೊಳ್ಳಲಿದ್ದಾರೆ. ತಿಂಡಿ ಸೇವನೆ ನಂತರ ಪಾದಯಾತ್ರೆ ಮುಂದುವರಿಸಲಿದ್ದಾರೆ. ಸೋನಿಯಾ ಅವರು 20 ನಿಮಿಷ ಹೆಜ್ಜೆ ಹಾಕಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಬಿಗಿ ಬಂದೋಬಸ್ತ್‌: ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್‌ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಭದ್ರತೆಯಲ್ಲಿ ಲೋಪವಾಗಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್‌ ಕುಮಾರ್‌ ಜಿಲ್ಲಾ ಪೊಲೀಸರೊಂದಿಗೆ ಸಭೆ ನಡೆಸಿ ಸಲಹೆ, ಸೂಚನೆ ನೀಡಿದ್ದಾರೆ.

‘ಕೇಂದ್ರೀಯ ಭದ್ರತಾ ಸಿಬ್ಬಂದಿಯೊಂದಿಗೆ ಸ್ಥಳೀಯ ಪೊಲೀಸರು ಸೂಕ್ತ ಭದ್ರತೆ ನೀಡಲಿದ್ದಾರೆ. ನಮ್ಮ ಸಿಬ್ಬಂದಿ ಈಗಾಗಲೇ ಪಾದಯಾತ್ರೆ ಸ್ಥಳಕ್ಕೆ ತೆರಳಿದ್ದಾರೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT