ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ 7 ಹೆಚ್ಚುವರಿ ರೈಲು ಸಂಚಾರ: ನೈರುತ್ಯ ರೈಲ್ವೆ ಪ್ರಕಟಣೆ

Last Updated 11 ಸೆಪ್ಟೆಂಬರ್ 2020, 11:24 IST
ಅಕ್ಷರ ಗಾತ್ರ

ಬೆಂಗಳೂರು: ವಿಶೇಷ ರೈಲುಗಳ ಜೊತೆಗೆ ಏಳು ಹೆಚ್ಚುವರಿ ರೈಲುಗಳು ನಾಳೆ ಬೆಂಗಳೂರಿನಿಂದ ಸಂಚಾರ ಆರಂಭಿಸಲಿವೆ ಎಂದು ನೈರುತ್ಯ ರೈಲ್ವೆ ವಲಯ ತಿಳಿಸಿದೆ.

‘ಬೆಂಗಳೂರು ವಿಭಾಗದಿಂದ 7 ರೈಲುಗಳು ಸೆಪ್ಟೆಂಬರ್‌ 12, 2020ರಿಂದ ಸಂಚಾರ ಆರಂಭಿಸಲಿವೆ. ಈ ಸೇವೆಯು ಸದ್ಯ ಸಂಚರಿಸುತ್ತಿರುವ ವಿಶೇಷ ರೈಲುಗಳ ಪಟ್ಟಿಗೆ ಹೆಚ್ಚುವರಿ ಸೇರ್ಪಡೆಯಾಗಲಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದೆ.

ಸದ್ಯ ಹಿರಿಯ ನಾಗರೀಕರು, ವಿದ್ಯಾರ್ಥಿಗಳು, ವಿಕಲಚೇತನರು ಮತ್ತು ಮಕ್ಕಳನ್ನು ನಿಲ್ದಾಣಗಳಿಗೆ ಬಿಡಲು ಹಾಗೂ ಕರೆದುಕೊಂಡು ಹೋಗಲು ಜನರು ಆಗಮಿಸುತ್ತಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್‌) ನಿಲ್ದಾಣ, ಯಶವಂತಪುರ ಹಾಗೂ ಇತರಕಂಟೋನ್ಮೆಂಟ್ ರೈಲ್ವೆ ನಿಲ್ದಾಣಗಳಲ್ಲಿಕೂಡಲೇಪ್ಲಾಟ್‌ಫಾರ್ಮ್‌ ಟಿಕೆಟ್‌ಗಳನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದೆ.

ಜೊತೆಗೆ, ಕೋವಿಡ್–19 ಪರಿಸ್ಥಿತಿ ಇರುವುದರಿಂದಾಗಿ ಜನದಟ್ಟಣೆ ನಿಯಂತ್ರಿಸಲು ಪ್ಲಾಟ್‌ಫಾರ್ಮ್‌ ಟಿಕೆಟ್‌ ದರವನ್ನು ₹ 10 ರಿಂದ ₹ 50ಕ್ಕೆ ಹೆಚ್ಚಿಸಲಾಗಿದೆ ಎಂದೂ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT