ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂಗಾರು: 32 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ

ಇಲಾಖೆಯ ಅಧಿಕಾರಿಗಳ ಜೊತೆ ಕೃಷಿ ಸಚಿವ ಬಿ.ಸಿ. ಪಾಟೀಲ ಸಭೆ
Last Updated 6 ನವೆಂಬರ್ 2020, 19:07 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಸಾಲಿನ (2020-21) ಹಿಂಗಾರು ಹಂಗಾಮಿನಲ್ಲಿ 32 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈ ಗುರಿ ತಲುಪಲು ಮತ್ತು ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಎಂದು ಇಲಾಖೆಯ ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ ಸೂಚಿಸಿದರು.

ಅಧಿಕಾರಿಗಳ ಜೊತೆ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ‘ಈ ಬಾರಿ ಉತ್ತಮ ಮಳೆ ಆಗಿರುವುದರಿಂದ ಮುಂಗಾರಿನಂತೆ ಹಿಂಗಾರಿನಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆಯಾಗುವ ನಿರೀಕ್ಷೆಯಿದೆ. ಹೀಗಾಗಿ, ಅಗತ್ಯವಾದ ರಸಗೊಬ್ಬರ, ಯೂರಿಯಾ ಪೂರೈಕೆಗೆ ಕ್ರಮ ತೆಗೆದುಕೊಳ್ಳಬೇಕು’ ಎಂದರು.

32 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ, ಈಗಾಗಲೇ 11.19 ಲಕ್ಷ ಹೆಕ್ಟೇರ್ (ಶೇ 35) ಪ್ರದೇಶದಲ್ಲಿ ಬಿತ್ತನೆಯಾಗಿದೆ. ಹಿಂಗಾರು ಅವಧಿಯಲ್ಲಿ ಜೋಳ ಮತ್ತು ಕಡಲೆ ಪ್ರಮುಖ ಬೆಳೆಗಳು. ಅ. 29ರವರೆಗೆ ದ್ವಿದಳ ಧಾನ್ಯಗಳು 14.28 ಲಕ್ಷ ಹೆಕ್ಟೇರ್ ಗುರಿಯಲ್ಲಿ 5.94 ಲಕ್ಷ ಹೆಕ್ಟೇರ್ ಸಾಧನೆಯಾಗಿದೆ. ಒಟ್ಟು ಆಹಾರ ಧಾನ್ಯಗಳ 27.54 ಲಕ್ಷ ಹೆಕ್ಟೇರ್ ಗುರಿಯ ಪೈಕಿ 9.73ರಷ್ಟು ಸಾಧನೆ ಯಾಗಿದ್ದು, 26.02 ಲಕ್ಷ ಟನ್ ಉತ್ಪಾ ದನೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT