ಮಂಗಳವಾರ, ಜೂನ್ 15, 2021
27 °C

ವಿಶೇಷ ಲಸಿಕಾ ಅಭಿಯಾನ ನಡೆಸಲು ಹೈಕೋರ್ಟ್ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋವಿಡ್ ಮುಂಚೂಣಿ ಕಾರ್ಯಕರ್ತರು ಮತ್ತವರ ಕುಟುಂಬ ಸದಸ್ಯರಿಗೆ ಲಸಿಕೆ ನೀಡಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕೋವಿಡ್‌ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿತು.

‘ಹಿರಿಯ ನಾಗರಿಕರು, ಅಂಗವಿಕಲರು, ಕೊಳಗೇರಿ ನಿವಾಸಿಗಳು, ದುರ್ಬಲ ವರ್ಗದವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲು ಕಾರ್ಯಕ್ರಮ ಆಯೋಜಿಸಬೇಕು. ಸ್ವಯಂ ಸೇವಾ ಸಂಸ್ಥೆಗಳ ನೆರವನ್ನೂ ಸರ್ಕಾರ ಪಡೆದುಕೊಳ್ಳಬೇಕು. ವಿಶೇಷ ಅಭಿಯಾನಗಳ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡಬೇಕು’ ಎಂದು ಪೀಠ ತಿಳಿಸಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು