ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು: ಸಿದ್ದರಾಮಯ್ಯ

Last Updated 27 ಆಗಸ್ಟ್ 2020, 22:24 IST
ಅಕ್ಷರ ಗಾತ್ರ

ಬೆಂಗಳೂರು: ‘ಲಾಕ್‌ಡೌನ್‌ ಘೋಷಣೆ ನಂತರ ಕೆಲಸವೂ ಇಲ್ಲದೆ, ವೇತನವೂ ಇಲ್ಲದೆ ಸಂಕಷ್ಟಕ್ಕೆ ಸಿಲುಕಿರುವ 2 ಲಕ್ಷಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರ ತಕ್ಷಣ ವಿಶೇಷ ಪ್ಯಾಕೇಜ್‌ ಮೂಲಕ ಆರ್ಥಿಕ ನೆರವು ನೀಡಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿಗೆ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

‘ಸರ್ಕಾರಿ ಶಾಲಾ– ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರಾಗಿ ಮತ್ತು ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ರಜಾ ದಿನಗಳನ್ನು ಕೋವಿಡ್‌ 19 ಕಾರಣಕ್ಕೆ ಕರ್ತವ್ಯದ ಅವಧಿ ಎಂದು ಪರಿಗಣಿಸಿ ಗೌರವಧನ ನೀಡಬೇಕು, ಪ್ರೌಢ ಶಾಲೆಗಳ ಸಹಶಿಕ್ಷಕರಿಗೆ ನಿಯಮಾನುಸಾರ ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ನೀಡಬೇಕು’ ಎಂದೂ ಅವರು ಒತ್ತಾಯಿಸಿದ್ದಾರೆ.

‘ಅನುದಾನಿತ ಶಾಲೆ–ಕಾಲೇಜುಗಳಲ್ಲಿ ಇದೇ ಮಾರ್ಚ್‌ವರೆಗೆ ಖಾಲಿ ಇರುವ ಹುದ್ದೆಗಳನ್ನು ತುಂಬಲು ಅನುಮತಿ ನೀಡಬೇಕು. ವಸತಿ ಶಾಲೆಗಳಲ್ಲಿ ಆರರಿಂದ 12ನೇ ತರಗತಿವರೆಗೆ ಮಕ್ಕಳ ಪ್ರವೇಶಕ್ಕೆ ನಿಗದಿಪಡಿಸಿದ ಪೋಷಕರ ಆದಾಯ ಮಿತಿಯನ್ನು ಎಸ್‌.ಸಿ, ಎಸ್‌.ಟಿ ಹಾಗೂ ಹಿಂದುಳಿದ 2 ಎ ವರ್ಗಕ್ಕೆ ₹ 4 ಲಕ್ಷ ಮತ್ತು ಇತರ ಹಿಂದುಳಿದ ವರ್ಗಗಳಿಗೆ ₹ 3 ಲಕ್ಷಕ್ಕೆ ಏರಿಸಬೇಕು. ಖಾಸಗಿ ಶಾಲೆಗಳಿಗೆ ಆರ್‌ಟಿಇ ಅಡಿ ಬಾಕಿ ಉಳಿಸಿಕೊಂಡಿರುವ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು’ ಎಂದೂ ಪತ್ರದಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT