ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅ.8ಕ್ಕೆ ರಾಷ್ಟ್ರಮಟ್ಟದ ವಾಲಿಬಾಲ್‌ ಟೂರ್ನಿ

Last Updated 6 ಸೆಪ್ಟೆಂಬರ್ 2021, 13:35 IST
ಅಕ್ಷರ ಗಾತ್ರ

ಚಿತ್ರದುರ್ಗ: ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ರಾಷ್ಟ್ರಮಟ್ಟದ ಆಹ್ವಾನಿತ ಪುರುಷ ಮತ್ತು ಮಹಿಳೆಯರ ಹೊನಲು ಬೆಳಕಿನ ಜಮುರಾ ಕಪ್‌ ವಾಲಿಬಾಲ್‌ ಟೂರ್ನಿಯನ್ನು ಅ.8ರಿಂದ 12ರವರೆಗೆ ಐದುದಿನ ಆಯೋಜಿಸಲಾಗಿದೆ ಎಂದು ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾಯ ಚನ್ನಯ್ಯ ಸ್ವಾಮೀಜಿ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ‘ಶಿವಮೂರ್ತಿ ಮುರುಘಾ ಶರಣರು ಪೀಠಾಧ್ಯಕ್ಷರಾಗಿ 30 ವರ್ಷವಾಗುತ್ತಿದೆ. ಈ ಸಂಭ್ರಮದಲ್ಲಿ ಶರಣ ಸಂಸ್ಕೃತಿ ಉತ್ಸವವನ್ನು ವಿಶಿಷ್ಟವಾಗಿ ರೂಪಿಸಲಾಗಿದೆ. ಇದೇ ಮೊದಲ ಬಾರಿಗೆ ರಾಷ್ಟ್ರಮಟ್ಟದ ವಾಲಿಬಾಲ್‌ ಟೂರ್ನಿ ಚಿತ್ರದುರ್ಗದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಯಲಿದೆ’ ಎಂದು ಮಾಹಿತಿ ನೀಡಿದರು.

‘ಕರ್ನಾಟಕ, ಪಂಜಾಬ್‌ ಪೊಲೀಸ್‌, ಇಂಡಿಯನ್‌ ಓವರಿಸ್‌ ಬ್ಯಾಂಕ್‌, ಹರಿಯಾಣ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ, ತಮಿಳುನಾಡಿನ ಎಸ್‌ಆರ್‌ಎಂ ವಿಶ್ವವಿದ್ಯಾಲಯ, ಗುಜರಾತಿನ ಅಖಿಲ ಭಾರತೀಯ ಆದಾಯ ತೆರಿಗೆ ಇಲಾಖೆ, ಭಾರತೀಯ ಸೇನೆ ಹಾಗೂ ರೈಲ್ವೆ ಪುರುಷ ತಂಡಗಳು ಪಾಲ್ಗೊಳ್ಳಲಿವೆ. ಮಹಿಳೆಯರ ವಿಭಾಗದಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಸಿಕಂದರಾಬಾದ್‌ ಹಾಗೂ ಮುಂಬೈ ರೈಲ್ವೆ ತಂಡಗಳನ್ನು ಆಹ್ವಾನಿಸಲಾಗಿದೆ. ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ವಿವರಿಸಿದರು.

ಶಿವಮೂರ್ತಿ ಮುರುಘಾ ಶರಣರು, ಕರ್ನಾಟಕ ವಾಲಿಬಾಲ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ನಂದಕುಮಾರ್, ಸಂಚಾಲಕ ಕೆ.ವೆಂಕಟೇಶ್, ಚಿತ್ರದುರ್ಗ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಾಬು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT