ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗಾಯತರನ್ನು ಓಬಿಸಿಗೆ ಸೇರಿಸಿ: ಶಿವಮೂರ್ತಿ ಮುರುಘಾ ಶರಣರು

Last Updated 27 ನವೆಂಬರ್ 2020, 11:23 IST
ಅಕ್ಷರ ಗಾತ್ರ

ಚಿತ್ರದುರ್ಗ: ಲಿಂಗಾಯತರೆಲ್ಲರೂ ಶ್ರೀಮಂತರಲ್ಲ, ಎಲ್ಲರೂ ಬಡವರೂ ಅಲ್ಲ. ಆರ್ಥಿಕವಾಗಿ ಹಿಂದುಳಿದವರ ಏಳಿಗೆಗಾಗಿ ಕೇಂದ್ರದ ಹಿಂದುಳಿದ ಜಾತಿಗಳ ಪಟ್ಟಿಗೆ ಲಿಂಗಾಯತರನ್ನು ಸೇರಿಸುವ ಅಗತ್ಯವಿದೆ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.

‘ಎಲ್ಲ ಜಾತಿ ಮತ್ತು ಧರ್ಮದಲ್ಲಿ ಮುಂದುವರಿದವರೂ ಹಾಗೂ ಶೋಷಣೆಗೆ ಒಳಗಾದವರಿದ್ದಾರೆ. ಲಿಂಗಾಯತರಲ್ಲಿ 80ಕ್ಕೂ ಹೆಚ್ಚು ಉಪಜಾತಿಗಳಿವೆ. ತುಳಿತಕ್ಕೆ ಒಳಗಾದವರು ಲಿಂಗಾಯತ ಸಮುದಾಯದಲ್ಲಿಯೂ ಇದ್ದಾರೆ. ಬಡ ಲಿಂಗಾಯತರ ಹಿತದೃಷ್ಟಿಯಿಂದ ಒಬಿಸಿ ಪಟ್ಟಿಗೆ ಸೇರಿಸುವುದು ಒಳಿತು’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಮೀಸಲಾತಿಗೆ ಸಂಬಂಧಿಸಿದಂತೆ ಸ್ವಾತಂತ್ರ್ಯ ಸಿಕ್ಕಾಗಿನಿಂದಲೂ ಹೋರಾಟ ನಡೆಯುತ್ತಿದೆ. ಸಂವಿಧಾನ ಕಲ್ಪಿಸಿದ ಸೌಲಭ್ಯವನ್ನು ಪಡೆಯಲು ಎಲ್ಲ ಜಾತಿಗಳು ಪ್ರಯತ್ನಿಸುತ್ತಿವೆ. ಅಗತ್ಯ ಸೌಲಭ್ಯ ಪಡೆಯುವ ಅವಕಾಶ ಎಲ್ಲರಿಗೂ ಇದೆ. ಹೀಗಾಗಿ, ಲಿಂಗಾಯತರನ್ನು ಒಬಿಸಿಗೆ ಸೇರುಸುವ ಹಕ್ಕೊತ್ತಾಯ ಮುಂದಿಡುತ್ತಿದ್ದೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT