ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶಂಕರಾಚಾರ್ಯ ಪ್ರತಿಮೆ ಇರುವ ಮಂಟಪದ ಗೋಪುರದ ಮೇಲೆ ಮಸೀದಿ ಚಿತ್ರವಿರುವ ಬಟ್ಟೆಯೊಂದು (ಹಸಿರು, ಕೆಂಪು, ತಿಳಿನೀಲಿ ಬಣ್ಣ) ಗುರುವಾರ ಕಂಡುಬಂದಿದೆ. ಇದರಿಂದ ವೃತ್ತದಲ್ಲಿ ಕೆಲಕಾಲ ಗೊಂದಲ ಸೃಷ್ಟಿಯಾಗಿತ್ತು.

ಬಜರಂಗ ದಳ, ಶ್ರೀರಾಮ ಸೇನೆ, ಬಿಜೆಪಿ ಮುಖಂಡರು, ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಕಿಡಿಗೇಡಿಗಳ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

‘ಶಂಕರಾಚಾರ್ಯರ ಪ್ರತಿಮೆ ಮೇಲೆ ಎಸ್ಡಿಪಿಐ ಬಾವುಟ ಹಾಕಲಾಗಿದೆ. ಬೆಂಗಳೂರಿನಲ್ಲಿ ನವೀನ್ ಫೇಸ್ಬುಕ್ನಲ್ಲಿ ಸತ್ಯವನ್ನೇ ಪೋಸ್ಟ್ ಮಾಡಿದ್ದಾನೆ. ಆರೋಪಿಗಳನ್ನು ಬಂಧಿಸದಿದ್ದರೆ ನಮ್ಮ ಪ್ರಕ್ರಿಯೆ ಶುರು ಮಾಡುತ್ತೇವೆ’ ಎಂದು ಬಿಜೆಪಿ ಮುಖಂಡ ಡಿ.ಎನ್. ಜೀವರಾಜ್ ಪೊಲೀಸರನ್ನು ಒತ್ತಾಯಿಸಿದರು.

ಈ ಸಂಬಂಧ ಶೃಂಗೇರಿಯ ಅರ್ಜನ್ ಎಂಬುವವರು ದೂರು ದಾಖಲಿಸಿದ್ದಾರೆ.

‘ಶೀಘ್ರದಲ್ಲಿ ಪತ್ತೆ ಹಚ್ಚುತ್ತೇವೆ’: ‘ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ ಮಾಡುತ್ತಿದ್ದೇವೆ. ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಹಚ್ಚುತ್ತೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ತಿಳಿಸಿದ್ದಾರೆ.

‘ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ’: ‘ಜೀವರಾಜ್ ಆರೋಪದಲ್ಲಿ ಹುರುಳಿಲ್ಲ. ಬೆಂಗಳೂರಿನ ಪ್ರಕರಣಕ್ಕೆ ಈ ಕೃತ್ಯವನ್ನು ತಳಕು ಹಾಕುವ ಯತ್ನ ಮಾಡಿದ್ದಾರೆ. ಪ್ರಕರಣಕ್ಕೂ ಎಸ್ಡಿಪಿಐಗೂ ಸಂಬಂಧ ಇಲ್ಲ. ಶೃಂಗೇರಿಯಲ್ಲಿ ಎಸ್ಡಿಪಿಐ ಅಸ್ತಿತ್ವದಲ್ಲಿ ಇಲ್ಲ. ಈ ಕೃತ್ಯ ಖಂಡನೀಯ. ಪೊಲೀಸರು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ’ ಎಂದು ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಅಜ್ಮತ್ ಪಾಷಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.