ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಸಮಾಧಾನವೂ ಇಲ್ಲ, ಅಸಮಾಧಾನವೂ ಇಲ್ಲ; ಖಾತೆ ಹಂಚಿಕೆ ಬಗ್ಗೆ ಸಚಿವ ಬಿ.ಶ್ರೀರಾಮುಲು

ಖಾತೆ ಹಂಚಿಕೆ ಬಗ್ಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿಕೆ
Published : 9 ಆಗಸ್ಟ್ 2021, 11:47 IST
ಫಾಲೋ ಮಾಡಿ
0
ಸಮಾಧಾನವೂ ಇಲ್ಲ, ಅಸಮಾಧಾನವೂ ಇಲ್ಲ; ಖಾತೆ ಹಂಚಿಕೆ ಬಗ್ಗೆ ಸಚಿವ ಬಿ.ಶ್ರೀರಾಮುಲು
ಬಿ.ಶ್ರೀರಾಮುಲು

ಚಿತ್ರದುರ್ಗ: ನೂತನ ಸಚಿವ ಸಂಪುಟದ ಖಾತೆ ಹಂಚಿಕೆಯ ವಿಚಾರದಲ್ಲಿ ಸಮಾಧಾನವೂ ಇಲ್ಲ, ಅಸಮಾಧಾನವೂ ಇಲ್ಲ. ಅಸಮಾಧಾನ ಇದ್ದರೂ ಸಮಾಧಾನದಿಂದ ಇರುವ ವ್ಯಕ್ತಿತ್ವ ನನ್ನದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ADVERTISEMENT
ADVERTISEMENT

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರಮಾಣವಚನ ಸ್ವೀಕರಿಸಿದ ಬಳಿಕ ತಿರುಪತಿಗೆ ತೆರಳಿದ್ದೆ. ದೇವರ ದರ್ಶನ ಪಡೆದು ಮರಳಿದ್ದೇನೆ. ರಾಜಕೀಯ ಬೆಳವಣಿಗೆಗಳ ಬಗ್ಗೆ ಮೌನವಹಿಸಿಲ್ಲ. ಯಾರು ಯಾವ ಖಾತೆ ನಿರ್ವಹಿಸಬೇಕು ಎಂಬುದು ಪಕ್ಷದ ಹಿರಿಯ ನಾಯಕರ ತೀರ್ಮಾನ’ ಎಂದು ಹೇಳಿದರು.

‘ಸತ್ಯಹರಿಶ್ಚಂದ್ರ ಅರಮನೆ ಹಾಗೂ ಸ್ಮಶಾನ ಎರಡನ್ನೂ ಸಮರ್ಥವಾಗಿ ನಿರ್ವಹಿಸಿದರು. ಅದೇ ರೀತಿ ನಾನೂ ಕೆಲಸ ಮಾಡಿಕೊಂಡು ಬಂದಿದ್ದೇನೆ. ಸ್ಮಶಾನದಲ್ಲಿ ಕೂಡ ಸೈ ಅನಿಸಿಕೊಳ್ಳುತ್ತೇನೆ. ಮೂವತ್ತು ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ರಾಜಕೀಯ ಪ್ರವೇಶಿಸಿದ್ದು, ಸಚಿವನಾಗಿದ್ದು ಎಲ್ಲವೂ ಸವಾಲುಗಳೇ ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

‘ಸಾರಿಗೆ ಇಲಾಖೆ ಬಹಳಷ್ಟು ನಷ್ಟದಲ್ಲಿದೆ. ಇದನ್ನು ಲಾಭದತ್ತ ಕೊಂಡೊಯ್ಯವ ಸವಾಲು ನನ್ನ ಮುಂದಿದೆ. ಇಲಾಖೆಯನ್ನು ಲಾಭದತ್ತ ತೆಗದುಕೊಂಡು ಹೋಗುವ ಕೆಲಸ ಮಾಡುತ್ತೇನೆ. ಬಿಎಂಟಿಸಿ ಬಸ್‌ ದರ ಏರಿಕೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಜನರಿಗೆ ಹೊರೆಯಾಗದಂತೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
Comments0