ಶನಿವಾರ, ಅಕ್ಟೋಬರ್ 31, 2020
27 °C

‘ಶ್ರೀವಿಜಯ’ ಪ್ರಶಸ್ತಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಕೊಡಮಾಡುವ ‘ಶ್ರೀವಿಜಯ ಸಾಹಿತ್ಯ ಪ್ರಶಸ್ತಿ’ಗೆ ಪ್ರಸಕ್ತ ಸಾಲಿನಲ್ಲಿ ರಾಯಚೂರಿನ ಚಿದಾನಂದ ಸಾಲಿ ಹಾಗೂ ಕಾರವಾರದ ಶ್ರೀದೇವಿ ಕೆರೆಮನೆ ಅವರನ್ನು ಆಯ್ಕೆ ಮಾಡಲಾಗಿದೆ.

ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್‌ ಅಧ್ಯಕ್ಷತೆಯ ಸಮಿತಿ ಶನಿವಾರ ಈ ಆಯ್ಕೆಯನ್ನು ಮಾಡಿದೆ. ಸಾಹಿತ್ಯ ಕ್ಷೇತ್ರಕ್ಕೆ ಮೌಲಿಕವಾದ ಕೊಡುಗೆ ನೀಡಿದ 45 ವರ್ಷದೊಳಗಿನವರಿಗೆ ನೀಡುವ ಈ ಪ್ರಶಸ್ತಿ ತಲಾ ₹60 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ ಎಂದು ಕಸಾಪ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು