ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎಸ್‌ಸಿ– ಕನ್ನಡಿಗರಿಗೆ ದ್ರೋಹ

Last Updated 8 ಅಕ್ಟೋಬರ್ 2022, 20:51 IST
ಅಕ್ಷರ ಗಾತ್ರ

ಬೆಂಗಳೂರು: ‘ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಟಿಯು (ಎಸ್‌ಎಸ್‌ಸಿ) 20 ಸಾವಿರ ಹುದ್ದೆಗಳ ನೇಮಕಾತಿಗೆ ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿರುವುದು ಖಂಡನೀಯ. ಈ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯುವ ಅವಕಾಶ ನೀಡದೆ ಕನ್ನಡಿಗರಿಗೆ ದ್ರೋಹ ಎಸಗಲಾಗಿದೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ರೈಲ್ವೆ, ಬ್ಯಾಂಕಿಂಗ್ ಸೇರಿ ಎಲ್ಲ ಪರೀಕ್ಷೆಗಳಲ್ಲೂ ಕನ್ನಡಿಗರಿಗೆ ಅನ್ಯಾಯವಾಗಿದೆ. ಎಸ್‌ಎಸ್‌ಸಿ ಪರೀಕ್ಷೆಗಳನ್ನೂ ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ನಡೆಸುವ ಮೂಲಕ ರಾಜ್ಯದ ಗ್ರಾಮೀಣ ಭಾಗದ ಮಕ್ಕಳಿಗೆ ಅನ್ಯಾಯ ಮಾಡಲಾಗುತ್ತಿದೆ. ರಾಜ್ಯದಲ್ಲಿನಡೆಯುವ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಿ, ಕನ್ನಡಿಗರಿಗೆ ಉದ್ಯೋಗ ನೀಡಲು ಏನು ಸಮಸ್ಯೆ? ಅನ್ಯ ರಾಜ್ಯದವರನ್ನು ಕರ್ನಾಟಕದಲ್ಲಿ ತುರುಕುವ ಪ್ರಯತ್ನ ಇದಲ್ಲವೆ’ ಎಂದು ಪ್ರಶ್ನಿಸಿದ್ದಾರೆ.

‘ಒಕ್ಕೂಟ ಸರ್ಕಾರ ಈಗ ನಡೆಸುತ್ತಿರುವ ಪರೀಕ್ಷೆಗಳನ್ನು ಕೂಡಲೇ ರದ್ದುಗೊಳಿಸಬೇಕು. ಕನ್ನಡ ಸೇರಿ ಎಲ್ಲ ಭಾಷೆಗಳಲ್ಲಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಬೇಕು. ಹೊಸದಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಿದೆ’ ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

–––

ವಿವಿಧೆಡೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಕೆ.ಪಿ.ಟಿ.ಸಿ.ಎಲ್‌ನಿಂದ ಅ.10ರಿಂದ 12ರ ತನಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿದ್ದು, ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಜಿ.ಎಸ್.ಪಾಳ್ಯ ಮುಖ್ಯರಸ್ತೆ, ಬಸವನಗರ, ಜಿ.ಎಸ್.ಪಾಳ್ಯ ಪ್ರದೇಶ, ಕೃಷ್ಣಾರೆಡ್ಡಿ ಲೇಔಟ್, ಸೆಮಿಕಾನ್ ಪಾರ್ಕ್, ಸತ್ಯಂ ಕಂಪ್ಯೂಟರ್, ಕೆಎಐಡಿಬಿ ಲೇಔಟ್, ಆ್ಯಕ್ಸಿಸ್ ಬ್ಯಾಂಕ್, ಫಿಡೆಲಿಟಿ ಫೈನಾನ್ಸ್ (ಬಿಪಿಒ), ಡಿ-ಲಿಂಕ್, ಎಚ್‌ಪಿ ಇಂದೂ, ಆನಂದ ರೆಡ್ಡಿ ಲೇಔಟ್, ಸುನಿಕ್ ಘಟಕಗಳು, ಪಿಕ್ಸೆಲ್‌ಗಳು ಸಾಫ್ಟ್‌ವೇರ್, ಗ್ಲೋಬಲ್ ಟೆಕ್‌ಪಾರ್ಕ್, ಎಲೆಕ್ಟ್ರಾನಿಕ್ ಸಿಟಿ 2ನೇ ಹಂತ, ವೀರಸಂದ್ರ, ದೊಡ್ಡನಾಗಮಂಗಲ, ಅನಂತನಗರ, ಶಾಂತಿಪುರ, ಬಯೋಕಾನ್, ಟೆಕ್ ಮಹೀಂದ್ರ ಸೇರಿ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ. ದೂರುಗಳಿದ್ದರೆ ಗ್ರಾಹಕರು 1912ಗೆ ಕರೆ ಮಾಡಿ ತಿಳಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT