ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

28ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ: ಹಿಜಾಬ್‌ಗೆ ಅವಕಾಶ ಇಲ್ಲ -ಸಚಿವ ನಾಗೇಶ್‌

ನ್ಯಾಯಾಲಯ ಆದೇಶ ಪಾಲಿಸಲು ಸೂಚನೆ
Last Updated 25 ಮಾರ್ಚ್ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 28ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆಯೂ ಹಿಜಾಬ್‌ಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಹೀಗಾಗಿ, ಹಿಜಾಬ್‌ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

‘ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆಯೂ ಹೈಕೋರ್ಟ್‌ನ ಆದೇಶ ಪಾಲಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

ಹಿಜಾಬ್‌ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈ ವಿಷಯದ ಬಗ್ಗೆ ಅನಗತ್ಯ ಗೊಂದಲಗಳನ್ನು ಸೃಷ್ಟಿಸುವುದು ಬೇಡ. ಕೋವಿಡ್‌ ನಂತರ ಮೊದಲ ಬಾರಿ ವಿದ್ಯಾರ್ಥಿಗಳು ಸಹ ಉತ್ಸಾಹದಿಂದ ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ. ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗೆ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಸಭೆಗಳನ್ನು ನಡೆಸಿ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಂಡಿದ್ದಾರೆ’ ಎಂದು ವಿವರಿಸಿದರು.

8.73 ಲಕ್ಷ ವಿದ್ಯಾರ್ಥಿಗಳು: ಎಸ್ಸೆಸ್ಸೆಲ್ಸಿಪರೀಕ್ಷೆ ಇದೇ 28ರಿಂದ ಏಪ್ರಿಲ್‌ 11ರವರೆಗೆ ನಡೆಯಲಿದ್ದು, ರಾಜ್ಯದಾದ್ಯಂತ ಒಟ್ಟು 15,387 ಶಾಲೆಗಳ 8,73,846 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 3,444 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದೆ. ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ಕೆಎಸ್‌ಇಇಬಿ) ನಿರ್ಧರಿಸಿದೆ.

ಅಕ್ರಮಗಳನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸೂಚಿಸಲಾಗಿದೆ. ಈ ಬಗ್ಗೆ ಈಗಾಗಲೇ ಇಲಾಖೆಯು ಸುತ್ತೋಲೆ ಹೊರಡಿಸಿದೆ. ಶಾಲಾ ಸಂಚಿತ ನಿಧಿಯಲ್ಲಿ ಲಭ್ಯವಿರುವ ಅನುದಾನದಲ್ಲಿ ₹40 ಸಾವಿರ ವೆಚ್ಚದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಸಿಸಿಟಿವಿ ದೃಶ್ಯಾವಳಿಗಳನ್ನು ಜಿಲ್ಲಾಮಟ್ಟದ ಸಮಿತಿಗಳಿಗೆ ಪ್ರತಿ ದಿನ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT