ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಆ.10ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
ಇಲಾಖೆಯ ಅಧಿಕೃತ ವೆಬ್ಸೈಟ್ kseeb.kar.nic.in ಅಥವಾ karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು.
ಮಾರ್ಚ್–ಏಪ್ರಿಲ್ನಲ್ಲಿ ನಡೆಯಬೇಕಾಗಿದ್ದ ಪರೀಕ್ಷೆ, ಜೂನ್ 25ರಿಂದ ಜುಲೈ 4ರವರೆಗೆ ನಡೆದಿತ್ತು. 7.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.