ಎಸ್ಸೆಸ್ಸೆಲ್ಸಿ ಅಂಕಗಳನ್ನು ಪರಿಗಣಿಸಿ ದ್ವಿತೀಯ ಪಿಯುಸಿ ಫಲಿತಾಂಶ: ಸುರೇಶ್ ಕುಮಾರ್

ಬೆಂಗಳೂರು: ‘ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಇನ್ನಷ್ಟು ಸಮಗ್ರವಾಗಲು ಮತ್ತು ಹೆಚ್ಚು ನ್ಯಾಯಯುತವಾಗಲು ಈ ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಅಂಕಗಳನ್ನು ಅವಲೋಕಿಸಿ, ಸೂಕ್ತವಾಗಿ ಮೌಲ್ಯ ಮಾಡುವ ಮೂಲಕ ಫಲಿತಾಂಶ ಘೋಷಿಸಬೇಕು’ ಎಂದು ಇಲಾಖೆಯ ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
‘ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಎಸ್ಸೆಸ್ಸೆಲ್ಸಿ ಅಂಕಗಳನ್ನು ಪಡೆದು, ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳೊಂದಿಗೆ ಸೂಕ್ತ ರೀತಿಯಲ್ಲಿ ಹೊಂದಿಸಿ ಜೂನ್ ತಿಂಗಳ ಅಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶ ಘೋಷಿಸುವ ವ್ಯವಸ್ಥೆ ಮಾಡಬೇಕು’ ಎಂದೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.