ಬುಧವಾರ, ಆಗಸ್ಟ್ 10, 2022
23 °C

ಎಸ್ಸೆಸ್ಸೆಲ್ಸಿ : ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎರಡು ಪರೀಕ್ಷೆಗಳು ಜುಲೈ ಮೂರನೇ ವಾರದಲ್ಲಿ ನಡೆಯಲಿದ್ದು, ಮಾದರಿ ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್ ಶೀಟ್ ಮಾಹಿತಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬಿಡುಗಡೆ ಮಾಡಿದೆ.

ಮೂರು ಪುಟಗಳ ಒಎಂಆರ್ ಶೀಟ್‌ನಲ್ಲಿ ಮೊದಲ ಪುಟದಲ್ಲಿ ಗಣಿತ, ಎರಡನೇ ಪುಟದಲ್ಲಿ ವಿಜ್ಞಾನ ಹಾಗೂ ಮೂರನೇ ಪುಟದಲ್ಲಿ ಸಮಾಜ ವಿಜ್ಞಾನ ವಿಷಯದ ಪ್ರಶ್ನೆಗಳಿಗೆ ಉತ್ತರಗಳನ್ನು ವಿದ್ಯಾರ್ಥಿಗಳು ಗುರುತು ಹಾಕಬೇಕು. ಪ್ರತಿ ಪುಟದಲ್ಲೂ ಆಯಾ ವಿಷಯಕ್ಕೆ ಸಂಬಂಧಿಸಿದ ಪ್ರತ್ಯೇಕ ಮಾಹಿತಿಯಿದೆ. ಮೂರು ಪುಟಗಳಲ್ಲೂ ವಿದ್ಯಾರ್ಥಿಯ ಫೋಟೊ ಮತ್ತು ಸಹಿ ಹಾಕಬೇಕಾಗುತ್ತದೆ. ಮೂರು ಪುಟಕ್ಕೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರತ್ಯೇಕ ಬಣ್ಣ ನೀಡಲಾಗಿದೆ.

ಮಾದರಿ ಪ್ರಶ್ನೆ ಪತ್ರಿಕೆಯನ್ನೂ ಮಂಡಳಿ ಬಿಡುಗಡೆ ಮಾಡಿದೆ. ಮೂರು ವಿಷಯದ ಪ್ರಶ್ನೆಗಳು ಒಂದೇ ಪ್ರಶ್ನೆ ಪತ್ರಿಕೆಯಲ್ಲಿ ಇರಲಿದೆ. ತಲಾ 40 ಪ್ರಶ್ನೆಗಳು ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಇರಲಿವೆ. ಎಲ್ಲ 40 ಪ್ರಶ್ನೆಗಳಿಗೂ ವಿದ್ಯಾರ್ಥಿಗಳು ಉತ್ತರಿಸಬೇಕು. ಒಎಂಆರ್ ಶೀಟ್ ಮಾದರಿಯಲ್ಲೇ ಮೊದಲು ಗಣಿತ, ಬಳಿಕ ವಿಜ್ಞಾನ ಮತ್ತು ಕೊನೆಯಲ್ಲಿ ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಇರಲಿದೆ. ಮೂರು ವಿಷಯದ ಒಂದು ಪ್ರಶ್ನೆಪತ್ರಿಕೆ ಸುಮಾರು 42 ಪುಟ ಇರಲಿದೆ.

ಎಲ್ಲ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರು ಮಾದರಿ ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್ ಶೀಟ್‌ಗಳನ್ನು ಡೌನ್‌ಲೋಡ್ ಮಾಡಿ, ಪರೀಕ್ಷೆಗೆ ವಿದ್ಯಾರ್ಥಿಗಳು ಸಿದ್ಧತೆ ಮಾಡಿಕೊಳ್ಳಲು ಅನುಕೂಲವಾಗುವಂತೆ ಮಾಹಿತಿ ನೀಡಲು ಸೂಚಿಸಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್‌ರಸೈಟ್‌ನಲ್ಲಿ ( https://sslc.karnataka.gov.in/) ಮಾದರಿ ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್ ಶೀಟ್‌ ಲಭ್ಯವಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು