ಗುರುವಾರ , ಆಗಸ್ಟ್ 18, 2022
23 °C

ಎಸ್ಸೆಸ್ಸೆಲ್ಸಿ, ಪ್ರಥಮ ಪಿಯುಸಿ ಅಂಕ ನೋಡಲು ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶವನ್ನು ಈ ಬಾರಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ನಿರ್ಣಯಿಸುವುದರಿಂದ, ಈ ವಿದ್ಯಾರ್ಥಿಗಳಿಗೆ ತಮ್ಮ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಆನ್‌ಲೈನ್ ಮೂಲಕ ನೋಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ.

ವಿದ್ಯಾರ್ಥಿಗಳು ತಮ್ಮ ಎರಡೂ ಪರೀಕ್ಷೆಗಳ ಫಲಿತಾಂಶಗಳು ಸರಿ ಇವೆಯೇ ಎಂಬುದನ್ನು ಪರಿಶೀಲಿಸಿ, ತಿದ್ದುಪಡಿ ಇದ್ದರೆ ಇಲಾಖೆಯ ಗಮನಕ್ಕೆ ತರಲು ಅವಕಾಶ ಮಾಡಿಕೊಡಲಾಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 20ರೊಳಗೆ ಹೊರಬೀಳುವ ಸಾಧ್ಯತೆ ಇದೆ. ಫಲಿತಾಂಶ ನೀಡುವುದಕ್ಕೂ ಮೊದಲು ಸಂಬಂಧಿಸಿದ ವಿದ್ಯಾರ್ಥಿಗಳ ಪರಿಶೀಲನೆಗಾಗಿ 10ನೇ ತರಗತಿ ಮತ್ತು ಪ್ರಥಮ ಪಿಯುಸಿ ಫಲಿತಾಂಶವನ್ನು ‘ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್‌ ವ್ಯವಸ್ಥೆ’ಯಲ್ಲಿ (ಎಸ್‌ಎಟಿಎಸ್– https://sts.karnataka.gov.in/SATSPU/# ) ನೋಡಬಹುದು.

ವಿದ್ಯಾರ್ಥಿಗಳು ಈ ವೆಬ್ ಪೋರ್ಟಲ್‌ನಲ್ಲಿ ಇಲಾಖೆ ನೀಡಿರುವ ತಮ್ಮ ಎಸ್‌ಎಟಿಎಸ್ ಸಂಖ್ಯೆ ಅಥವಾ ಕಾಲೇಜಿನಲ್ಲಿ ನೀಡಿದ್ದ ವಿದ್ಯಾರ್ಥಿ ಸಂಖ್ಯೆ ಅಥವಾ ಪರೀಕ್ಷಾ ನೋಂದಣಿ ಸಂಖ್ಯೆ ಈ ಮೂರರಲ್ಲಿ ಯಾವುದಾದರೂ ಒಂದು ಸಂಖ್ಯೆ ನಮೂದಿಸಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರತ್ಯೇಕವಾಗಿ ಪರಿಶೀಲಿಸಿಕೊಳ್ಳಬಹುದು. ಫಲಿತಾಂಶದಲ್ಲಿ ವ್ಯತ್ಯಾಸಗಳಿದ್ದರೆ ತಮ್ಮ ಶಾಲೆ ಅಥವಾ ಕಾಲೇಜಿನ ಪ್ರಾಂಶುಪಾಲರನ್ನು ಇದೇ 12ರ ಒಳಗೆ ಸಂಪರ್ಕಿಸಿ ಮಾಹಿತಿ ನೀಡಬೇಕು. ಪ್ರಾಂಶುಪಾಲರು ಅದನ್ನು ಸರಿಪಡಿಸಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಇಲಾಖೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು