ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗಸ್ಟ್ 10ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Last Updated 20 ಜುಲೈ 2021, 20:13 IST
ಅಕ್ಷರ ಗಾತ್ರ

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್‌ 10 ರ ವೇಳೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮವಾರ ನಡೆದ ಪರೀಕ್ಷೆಗೆ ಶೇ 99.6 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಎಲ್ಲೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಹೇಳಿದರು.

ಇದು ಶಿಕ್ಷಣ ಇಲಾಖೆಯ ಪರೀಕ್ಷೆ ಆಗಿರಲಿಲ್ಲ. ಸಾರ್ವಜನಿಕರ ಪರೀಕ್ಷೆ ಆಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬರು ಗೊಂದಲಕ್ಕೆ ಒಳಗಾಗಿ ಬೇರೊಂದು ಪರೀಕ್ಷಾ ಕೇಂದ್ರಕ್ಕೆ ಹೋದಾಗ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬರು ತಮ್ಮ ದ್ವಿಚಕ್ರ ವಾಹನದಲ್ಲಿ ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದರು ಎಂದರು.

ಪರೀಕ್ಷೆಗೆ ಬಂದವರಲ್ಲಿ 58 ವಿದ್ಯಾರ್ಥಿಗಳಿಗೆ ಕೋವಿಡ್‌ ದೃಢವಾಗಿತ್ತು. ಅವರಿಗೆ ಕೋವಿಡ್‌ ಆರೈಕೆ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಯಿತು. ಕೋವಿಡ್‌ ಲಕ್ಷಣಗಳು ಇದ್ದ 111 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT