ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: 7.38 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: 2021–22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಶೇ 85.63ರಷ್ಟು ಫಲಿತಾಂಶ ಬಂದಿದೆ. 7.38 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಒಟ್ಟು 8.53 ಲಕ್ಷ ಜನ ಪರೀಕ್ಷೆಗೆ ಹಾಜರಾಗಿದ್ದರು. ಇವರ ಪೈಕಿ 7.38 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
SSLC ಫಲಿತಾಂಶ ಪ್ರಕಟ.
ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ.
ಉತ್ತೀರ್ಣ ಪ್ರಮಾಣ:
ಬಾಲಕಿಯರು- ಶೇ. 90.29
ಬಾಲಕರು- ಶೇ. 81.30.8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
7,30,881 ವಿದ್ಯಾರ್ಥಿಗಳು ಉತ್ತೀರ್ಣ.ಪೂರಕ ಪರೀಕ್ಷೆ- ಜೂನ್ 27, 2022.#sslcresults
— B.C Nagesh (@BCNagesh_bjp) May 19, 2022
145 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ.
227 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಿತು. 52,219 ಮೌಲ್ಯಮಾಪಕರು ಉತ್ತರಪತ್ರಿಕೆಗಳ ಮೌಲ್ಯಮಾಪನ ಮಾಡಿದ್ದಾರೆ’ ಎಂದು ಸಚಿವರು ಮಾಹಿತಿ ನೀಡಿದರು..
ವಿದ್ಯಾರ್ಥಿಗಳು ಫಲಿತಾಂಶವನ್ನು ಈ ವೆಬ್ ಸೈಟ್‌ಗಳ ಮೂಲಕ ನೋಡಬಹುದು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.