ಶನಿವಾರ, ಸೆಪ್ಟೆಂಬರ್ 26, 2020
22 °C

ಎಸ್ಸೆಸ್ಸೆಲ್ಸಿ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2019–20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಸೋಮವಾರ (ಆಗಸ್ಟ್‌ 10) ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಉತ್ತೀರ್ಣಗೊಂಡ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ಅಂಕಗಳ ವಿವರದ ಎಸ್‌ಎಂಎಸ್‌ ರವಾನೆ ಆಗಲಿದೆ.

ಇಲಾಖೆಯ ಅಧಿಕೃತ ಜಾಲತಾಣಗಳಾದ kseeb.kar.nic.in ಅಥವಾ karresults.nic.in ನಲ್ಲಿಯೂ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು. ಫಲಿತಾಂಶ ತಿಳಿಯಲು ಯಾವುದೇ ಸಂಖ್ಯೆಗೆ ವಿದ್ಯಾರ್ಥಿಗಳು ಎಸ್‌ಎಂಎಸ್ ಕಳುಹಿಸುವ ಅಗತ್ಯವಿಲ್ಲ. ಮಂಡಳಿಯೇ ಉಚಿತವಾಗಿ ಕಳಿಸಲಿದೆ. ನೆಟ್ ವರ್ಕ್ ಸಮಸ್ಯೆ ಆಗದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ಜೂನ್‌ 25ರಿಂದ ಜುಲೈ 4ರವರೆಗೆ ನಡೆದ ಪರೀಕ್ಷೆಯಲ್ಲಿ 7.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು