ಬುಧವಾರ, ಆಗಸ್ಟ್ 17, 2022
29 °C

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಕನಿಷ್ಠ ಎರಡು ತಿಂಗಳು ವಿಳಂಬವಾಗಿ ನಡೆಯುವ ಸಾಧ್ಯತೆ ಇದೆ.

ಪರೀಕ್ಷಾ ವೇಳಾಪಟ್ಟಿ ಸಿದ್ಧಪಡಿಸುವಂತೆ ರಾಜ್ಯ ಪ್ರೌಢಶಿಕ್ಷಣ ಮತ್ತು ಪರೀಕ್ಷಾ ಮಂಡಳಿ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಇತ್ತೀಚೆಗೆ ಸೂಚನೆ ನೀಡಿತ್ತು. ಆದರೆ, ಇದೀಗ ವೇಳಾಪಟ್ಟಿ ಸಿದ್ಧಪಡಿಸಲು ಇನ್ನೂ ಕೆಲವು ದಿನಗಳು ಕಾಯುವಂತೆ ಸೂಚನೆ ನೀಡಿದೆ.

‘ಶಾಲೆ, ಪದವಿಪೂರ್ವ ತರಗತಿಗಳು ಇನ್ನೂ ಆರಂಭವಾಗಿಲ್ಲ. ಅಲ್ಲದೆ, ಆನ್‌ಲೈನ್‌– ಆಫ್‌ಲೈನ್‌ ಶಿಕ್ಷಣ ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ತಲುಪುತ್ತಿಲ್ಲ. ಹೀಗಾಗಿ, ಪ್ರತಿ ವರ್ಷ ಮಾರ್ಚ್‌– ಏಪ್ರಿಲ್ ತಿಂಗಳಲ್ಲಿ ನಡೆಸುವ ಪರೀಕ್ಷೆಗಳನ್ನು ಜೂನ್‌– ಜುಲೈ ತಿಂಗಳಿಗೆ ಮುಂದೂಡುವಂತೆ ತಾಂತ್ರಿಕ ಸಮಿತಿ ಸಲಹೆ ನೀಡಿದೆ.

‘ಪರೀಕ್ಷೆಗಳನ್ನು ಎರಡು ತಿಂಗಳಮಟ್ಟಿಗೆ ಮುಂದೂಡುವಂತೆ ನಾವು ಸಲಹೆ ನೀಡಿದ್ದೇವೆ’ ಎಂದು ತಾಂತ್ರಿಕ ಸಮಿತಿಯ ಸದಸ್ಯ ಡಾ.ಸಿ.ಎನ್‌. ಮಂಜುನಾಥ್‌ ತಿಳಿಸಿದ್ದಾರೆ. ಅಲ್ಲದೆ, ಶಾಲಾ ಅವಧಿಗೆ ಅವಕಾಶ ಕಲ್ಪಿಸಲು ಮುಂದಿನ ವರ್ಷದ ಬೇಸಿಗೆ ರಜಾ ದಿನವನ್ನು ಕಡಿತಗೊಳಿಸುವಂತೆಯೂ ಸಮಿತಿ ಸಲಹೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು