ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕಿಯರ ಮೇಲುಗೈ

Last Updated 11 ಅಕ್ಟೋಬರ್ 2021, 5:23 IST
ಅಕ್ಷರ ಗಾತ್ರ

ಬೆಂಗಳೂರು: 2020-2021ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಸೆಪ್ಟೆಂಬರ್ 27 ಹಾಗೂ 29 ರಂದು ನಡೆದಿದ್ದ ಪರೀಕ್ಷೆಗೆ ಒಟ್ಟು 59,155 ಮಂದಿ ಹಾಜರಾಗಿದ್ದರು.

ಈ ಪೈಕಿ 29,522 ವಿದ್ಯಾರ್ಥಿಗಳು (ಶೇ 55.54) ಉತ್ತೀರ್ಣರಾಗಿದ್ದಾರೆ' ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

'ಈ ಬಾರಿ 17,973 ಬಾಲಕಿಯರು ಪರೀಕ್ಷೆ ಬರೆದಿದ್ದರು. ಈ ಪೈಕಿ 10,290 ಜನ ( ಶೇ 57.25) ತೇರ್ಗಡೆಯಾಗಿದ್ದಾರೆ. 35,182 ಬಾಲಕರ ಪೈಕಿ 19, 232 ಜನ (ಶೇ 54.66) ಉತ್ತೀರ್ಣರಾಗಿದ್ದಾರೆ' ಎಂದರು.

'3,232 ಸರ್ಕಾರಿ ಶಾಲೆಗಳ 27,313 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಈ ಪೈಕಿ 15,855 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ' ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT