ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ | ಆಸ್ತಿ ಮುಟ್ಟುಗೋಲಿಗೆ ಸೂಚನೆ: ಸೋಮಶೇಖರ್‌

Last Updated 20 ಡಿಸೆಂಬರ್ 2021, 19:46 IST
ಅಕ್ಷರ ಗಾತ್ರ

ಬೆಳಗಾವಿ(ಸುವರ್ಣ ವಿಧಾನಸೌಧ): ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿದ್ದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್‌ ಹೇಳಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ರುಚಿ, ಪರಿಶುದ್ಧತೆಯ ಮೂಲಕ ನಂದಿನಿ ತುಪ್ಪ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ನಿತ್ಯ ನೂರು ಟನ್‌ಗೂ ಹೆಚ್ಚು ತುಪ್ಪ ತಯಾರಿ ಮಾಡಲಾಗುತ್ತದೆ. ತಿರುಪತಿ, ಅಯೋಧ್ಯೆಗೆ ನಂದಿನಿ ತುಪ್ಪ ಕಳುಹಿಸಲಾಗುತ್ತಿದೆ. ಸೇನೆಗೂ ಸಹ ನಂದಿನಿ ತುಪ್ಪ ಪೂರೈಸಲಾಗುತ್ತಿದೆ. ಇಂತಹ ಶ್ರೇಷ್ಠ ದರ್ಜೆಯ ನಂದಿನಿ ತುಪ್ಪದ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸಿದರೆ ಸಾರ್ವಜನಿಕರು ಕೆಎಂಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT