ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎಸ್‌ಸಿ: ಮತ್ತೆ ಕನ್ನಡ ಕಡೆಗಣನೆ, ಇಂಗ್ಲಿಷ್‌, ಹಿಂದಿಯಲ್ಲಿ ಮಾತ್ರ ಪರೀಕ್ಷೆ

ಕಾನ್‌ಸ್ಟೆಬಲ್‌ ಹುದ್ದೆಗೆ ಅರ್ಜಿ ಆಹ್ವಾನ
Last Updated 28 ಅಕ್ಟೋಬರ್ 2022, 21:00 IST
ಅಕ್ಷರ ಗಾತ್ರ

ಬೆಂಗಳೂರು:ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ) ಮತ್ತೊಮ್ಮೆ ಪ್ರಾದೇಶಿಕ ಭಾಷೆಗಳ ವಿರೋಧಿ ನೀತಿ ಅನುಸರಿಸಿದೆ.

ಎಸ್‌ಎಸ್‌ಸಿ ನಡೆಸುವ ಪರೀಕ್ಷೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್‌ ಮಾತ್ರ ಕಡ್ಡಾಯಗೊಳಿಸಿರುವುದಕ್ಕೆ ಕನ್ನಡ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಎಸ್‌ಎಸ್‌ಸಿ ಧೋರಣೆಯಿಂದಕನ್ನಡಿಗರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆಎಂದು ಸಂಘಟನೆ
ಗಳ ಕಾರ್ಯಕರ್ತರು ಕಿಡಿಕಾರಿದ್ದಾರೆ.

ಗಡಿ ಭದ್ರತಾ ಪಡೆ(ಬಿಎಸ್‌ಎಫ್‌), ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌), ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌), ಇಂಡೊ ಟಿಬೆಟನ್‌ ಗಡಿ ಪೊಲೀಸ್‌ (ಐಟಿಬಿಪಿ), ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ), ಸಚಿವಾಲಯ ಭದ್ರತಾ
ಪಡೆಯಲ್ಲಿ (ಎಸ್‌ಎಸ್‌ಎಫ್‌) ಕಾನ್‌ಸ್ಟೆಬಲ್‌ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ರೈಫಲ್‌ಮೆನ್‌ (ಜನರಲ್‌ ಡ್ಯೂಟಿ) ಹಾಗೂ ಮಾದಕ ದ್ರವ್ಯ ನಿಯಂತ್ರಣ (ಎನ್‌ಸಿಬಿ) ಇಲಾಖೆಯಲ್ಲಿ ಸಿಪಾಯಿ ಹುದ್ದೆಗಳಿಗೆ ಎಸ್‌ಎಸ್‌ಸಿ ಅರ್ಜಿ ಆಹ್ವಾನಿಸಿದೆ.

ಅ.27ರಿಂದ ನ.30ರವರೆಗೆಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. 2023ರ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ ಎಂದು ಎಸ್‌ಎಸ್‌ಸಿ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

‘ಕನ್ನಡಿಗರಿಗೆ ಅನ್ಯಾಯವಾಗಲಿದೆ’

‘10ನೇ ತರಗತಿ ಓದಿರುವ ವಿದ್ಯಾರ್ಥಿ ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯುವುದು ಹೇಗೆ ಸಾಧ್ಯ?ಬಹುತೇಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದವರಲ್ಲೇ ಓದಿರುತ್ತಾರೆ’ ಎಂದು ಕನ್ನಡ ಪರ ಕಾರ್ಯಕರ್ತ ಅರುಣ್‌ ಜಾವಗಲ್‌ ಹೇಳಿದ್ದಾರೆ.

‘ಎಸ್‌ಎಸ್‌ಸಿ ಪ್ರಾದೇಶಿಕ ಭಾಷೆಗಳ ವಿರೋಧಿಯಾಗಿದ್ದು, ಕನ್ನಡಿಗರು ಈ ಹುದ್ದೆಗಳಿಂದ ವಂಚಿತರಾಗಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಹಿಂದಿ ಭಾಷಿಕ ಪ್ರದೇಶಗಳ ಅಭ್ಯರ್ಥಿಗಳು ಮಾತ್ರ ಆಯ್ಕೆಯಾಗುತ್ತಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.‘ಕಳೆದ ಬಾರಿಯ ಪ್ರತಿಭಟನೆಗೆ ಬೆಲೆ ನೀಡಿಯಾದರೂ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ನೀಡಬೇಕಾಗಿತ್ತು. ಈಗ ಮತ್ತೊಮ್ಮೆ ಹೋರಾಟ ಮಾಡುತ್ತೇವೆ’ ಎಂದು ಅವರು ಹೇಳಿದ್ದಾರೆ.

ಒಟ್ಟು 24,369 ಹುದ್ದೆಗಳಿಗೆ ಅರ್ಜಿ ಆಹ್ವಾನ...
ಒಟ್ಟು 24,369 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆದರೆ, ಈ ಹುದ್ದೆಗಳಿಗೆ ನಡೆಯುವ ಪರೀಕ್ಷೆಯನ್ನು ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾತ್ರ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ನೇಮಕಾತಿ ಪ್ರಕ್ರಿಯೆಯು ಕಂಪ್ಯೂಟರ್‌ ಆಧಾರಿತ ಪರೀಕ್ಷೆ (ಸಿಬಿಇ) ಮತ್ತು ದೈಹಿಕ ಸಾಮರ್ಥ್ಯ ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿದೆ. ಕಂಪ್ಯೂಟರ್‌ ಆಧಾರಿತ ಪರೀಕ್ಷೆಯು ಕೇವಲ ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ನಡೆಯಲಿದೆ.

ಜತೆಗೆ, ಅಭ್ಯರ್ಥಿಗಳ ಇಂಗ್ಲಿಷ್‌/ಹಿಂದಿ ಭಾಷಾ ಜ್ಞಾನವನ್ನು ಸಹ ಪರೀಕ್ಷಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ ಹತ್ತನೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ದೇಶದ ವಿವಿಧೆಡೆ ಪರೀಕ್ಷೆ ನಡೆಯಲಿದ್ದು,ಕರ್ನಾಟಕದಲ್ಲಿ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲ ಬುರಗಿ,ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ನಡೆಯಲಿದೆ.

ಆಕ್ರೋಶ:
ಕಳೆದ ತಿಂಗಳು ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಖಾಲಿ ಉಳಿದಿದ್ದ 20 ಸಾವಿರಕ್ಕೂ ಹೆಚ್ಚು ’ಬಿ’ ಮತ್ತು ’ಸಿ’ ದರ್ಜೆಯ ಹುದ್ದೆಗಳಿಗೆ ಎಸ್‌ಎಸ್‌ಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ನೇಮಕಾತಿ ಪ್ರಕ್ರಿಯೆಯು ಸಹ ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ನಡೆಯಿತು. ಇದು ಸಹ ಕನ್ನಡಿಗರ ಉದ್ಯೋಗಾವಕಾಶಗಳನ್ನು ಕಸಿಯಿತು. ಈಗ ಮತ್ತೊಮ್ಮೆ ಇದೇ ರೀತಿ ಅನ್ಯಾಯ ನಡೆಯುತ್ತಿದೆ ಎಂದು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT