ಬೆಂಗಳೂರು: ಕೋವಿಡ್ ಕಡಿಮೆ ಆಗುತ್ತಿರುವುದರಿಂದ ಜುಲೈನಲ್ಲಿ ನಡೆಯಲಿರುವ 2022-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಎಸ್ಒಪಿ (ಪ್ರಮಾಣಿತ ಕಾರ್ಯಾಚರಣೆ ವಿಧಾನ) ಬಿಡುಗಡೆ ಮಾಡಲಾಗಿದ್ದು, ಅದರ ಆಧಾರದ ಮೇಲೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಜುಲೈ 3ನೇ ವಾರದಲ್ಲಿ ನಡೆಸಲು ಉದ್ದೇಶಿಸಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧದಲ್ಲಿ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರೂಪಿಸಿದ ಎಸ್ಒಪಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

‘ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ಜಿಲ್ಲಾಡಳಿತದ ಸಹಕಾರದಿಂದ ಕೋವಿಡ್ ಲಸಿಕೆ ಪಡೆಯಬೇಕು. ಪರೀಕ್ಷಾ ವೇಳೆಯೊಳಗೆ ಒಂದು ಡೋಸ್ ಲಸಿಕೆಯನ್ನಾದರೂ ಪಡೆದಿರಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಎಸ್ಒಪಿ ಅನುಷ್ಠಾನಗೊಳಿಸಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರೀಕ್ಷಾ ಪೂರ್ವದಲ್ಲಿ ಜಿಲ್ಲಾಧಿಕಾರಿಗಳು, ಸಿಇಒ ಮತ್ತು ಎಸ್ಪಿ ಪರಿಶೀಲಿಸಿ, ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು’ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ಪರೀಕ್ಷೆ ಆರಂಭಕ್ಕೂ ಮೊದಲು ಮತ್ತು ಪರೀಕ್ಷೆಯ ಬಳಿಕ ಸೋಂಕು ನಿವಾರಕ ದ್ರಾವಣದಿಂದ ಸ್ಥಳೀಯಾಡಳಿತ ಸಂಸ್ಥೆಗಳ ನೆರವಿನಿಂದ ಪರೀಕ್ಷಾ ಕೇಂದ್ರ, ಪರೀಕ್ಷಾ ಕೊಠಡಿ, ಪೀಠೋಪಕರಣ ಮತ್ತು ಶೌಚಾಲಯಗಳನ್ನು ಸ್ಯಾನಿಟೈಜೇಷನ್ ಮಾಡುವುದು, ಪರೀಕ್ಷಾ ಕೇಂದ್ರಕ್ಕೆ ಬರುವ ಮತ್ತು ನಿರ್ಗಮನ, ಕೊಠಡಿ ಪ್ರವೇಶ ಸಮಯದಲ್ಲಿ ಅಂತರ ಕಾಪಾಡಿಕೊಳ್ಳುವುದು. ಪರೀಕ್ಷಾ ಕೇಂದ್ರದ ಪ್ರವೇಶದ ಸಂದರ್ಭದಲ್ಲಿ ಮಕ್ಕಳ ಕೈಗೆ ಸ್ಯಾನಿಟೈಜ್ ಮಾಡುವುದು. ಪರೀಕ್ಷಾ ಕೊಠಡಿಯಲ್ಲಿ 12 ಮಕ್ಕಳಿರಬೇಕು, ಒಂದು ಡೆಸ್ಕ್ ಗೆ ಒಬ್ಬ ಪರೀಕ್ಷಾರ್ಥಿ ಮಾತ್ರವೇ ಇರಬೇಕು. ಮಕ್ಕಳು ಯಾವ ಸಮಯದಲ್ಲೂ ಗುಂಪು ಗೂಡುವುದನ್ನು ತಡೆಯುವುದು. ಮನೆಯಿಂದ ನೀರಿನ ಬಾಟಲಿ ಮತ್ತು ಊಟದ ಡಬ್ಬಿ ತರುವುದಕ್ಕೆ ಅವಕಾಶ ಕಲ್ಪಿಸುವುದು. ಪರೀಕ್ಷಾ ಕೊಠಡಿಯಲ್ಲಿ ಮಳೆ ನೀರು ಇರುಚಲು ಸಿಂಪಡಿಸದಂತೆ ಕ್ರಮ ವಹಿಸುವುದು. ಗ್ರಾಮೀಣ ವಿಭಾಗದ ಅಭ್ಯರ್ಥಿಗಳು ಸಾಧ್ಯವಾದಷ್ಟು ತಾಲ್ಲೂಕು ಕೇಂದ್ರಗಳಿಗೆ ಹೋಗದಂತೆ ಪರೀಕ್ಷಾ ಕೇಂದ್ರಗಳನ್ನು ರಚಿಸುವುದನ್ನು ಖಾತರಿಪಡಿಸಿಕೊಳ್ಳಬೇಕೆಂದು ಎಸ್ಒಪಿಯಲ್ಲಿ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಶೇಷ ಕೊಠಡಿ: ‘ಕೆಮ್ಮು, ನೆಗಡಿ, ಜ್ವರ ಲಕ್ಷಣಗಳಿರುವ ಅಭ್ಯರ್ಥಿಗಳಿಗೆ ಕನಿಷ್ಠ ಎರಡು ವಿಶೇಷ ಕೊಠಡಿ ಕಾಯ್ದಿರಿಸಬೇಕು. ಪರೀಕ್ಷಾ ಕೇಂದ್ರದ ಪ್ರವೇಶವಾದೊಡನೆ ನೇರವಾಗಿ ಆರೋಗ್ಯ ತಪಾಸಣಾ ಕೇಂದ್ರ ಪ್ರವೇಶಿಸುವಂತೆ ನಿರ್ದೇಶಿಸುವುದು. ಆರೋಗ್ಯ ಕೇಂದ್ರಗಳು ಬೆಳಿಗ್ಗೆ 8.30ಕ್ಕೆ ಅರಂಭವಾಗಿ ಪರೀಕ್ಷಾ ಪ್ರಕ್ರಿಯೆ ಮುಗಿಯುವವರೆಗೆ ತೆರದಿರಲಿವೆ. ಥರ್ಮಲ್ ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳಿರುವುದನ್ನು ಖಾತರಿಪಡಿಸಬೇಕು ಎಂದು ಸೂಚಿಸಲಾಗಿದೆ. ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್ಗಳಲ್ಲೇ ಮಾಸ್ಕ್ ನೀಡಲಾಗುತ್ತದೆ’ ದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ತುರ್ತು ಚಿಕಿತ್ಸಾ ವಾಹನ: ‘ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ತಾಲ್ಲೂಕಿಗೊಂದು ತುರ್ತು ಚಿಕಿತ್ಸಾ ವಾಹನ ಮೀಸಲಿಡುವುದು. ಪರೀಕ್ಷಾ ಸಿಬ್ಬಂದಿಯೂ ಅಂತರ ಕಾಪಾಡಿಕೊಳ್ಳಬೇಕು. ಅಗತ್ಯ ಬಿದ್ದರೆ ಫೇಸ್ ಶೀಲ್ಡ್ ಬಳಸಬೇಕು. ಗಡಿಭಾಗದ ಪರೀಕ್ಷಾ ಕೇಂದ್ರಗಳಿಗೆ ಹೊರರಾಜ್ಯದಿಂದ ಬರುವ ಪರೀಕ್ಷಾರ್ಥಿಗಳಿಗೆ ಅನುವಾಗುವಂತೆ ಪರೀಕ್ಷೆಗಳ ದಿವಸದಂದು ರಾಜ್ಯದ ಗಡಿ ಪ್ರವೇಶಕ್ಕೆ ಜಿಲ್ಲಾಡಳಿತದ ಸಮನ್ವಯದೊಂದಿಗೆ ಕ್ರಮ ವಹಿಸಬೇಕು’ ಎಂದೂ ಅವರು ತಿಳಿಸಿದ್ದಾರೆ.

ಕೋವಿಡ್ ಕೇರ್ ಸೆಂಟರ್ ಸ್ಥಾಪನೆ: ‘ಕೋವಿಡ್ ದೃಢಪಟ್ಟಿರುವ ವಿದ್ಯಾರ್ಥಿಗಳಿಗೆ ತಾಲ್ಲೂಕಿಗೊಂದು ಕೋವಿಡ್ ಕೇರ್ ಕೇಂದ್ರ ಸ್ಥಾಪಿಸಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗುವುದು. ಕುಟುಂಬದಲ್ಲಿ ಯಾರಿಗಾದರೂ ಸೋಂಕು ತಗುಲಿದ್ದು, ಪರೀಕ್ಷಾರ್ಥಿ ಐಸೋಲೇಷನ್ನಲ್ಲಿದ್ದರೆ ಅವರನ್ನು ತಪಾಸಣೆ ನಡೆಸಿ ಆರೋಗ್ಯವಾಗಿರುವುದು ಕಂಡುಬಂದರೆ ಸಮೀಪದ ವಿದ್ಯಾರ್ಥಿ ಕೋವಿಡ್ ಕೇರ್ ಸೆಂಟರ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಕೋವಿಡ್ ಆರೈಕೆ ಕೇಂದ್ರದಲ್ಲಿ ಆಂಬುಲೆನ್ಸ್ ವಾಹನ ಕಾಯ್ದಿರಿಸಲಾಗುವುದು’ ಎಂದು ತಿಳಿಸಿದ್ದಾರೆ.

‘ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ರವಾನೆ, ಪರೀಕ್ಷೆ ನಂತರ ಒಎಂಆರ್ ಶೀಟ್ಗಳ ರವಾನೆ ಕುರಿತು ನಿಗದಿತ ಸೂಚನೆಗಳನ್ನು ಒದಗಿಸಲಾಗಿದ್ದು, ಆರೋಗ್ಯಕರ ವಾತಾವರಣದಲ್ಲಿ ಪರೀಕ್ಷೆ ಯಶಸ್ಸಿಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ’ ಎಂದು ಸಚಿವರು ತಿಳಿಸಿದ್ದಾರೆ.

28ರಂದು ವಿಡಿಯೊ ಸಂವಾದ: ಪರೀಕ್ಷೆಯನ್ನು ಸುಲಲಿತ ಹಾಗೂ ಆರೋಗ್ಯಕರ ಪರಿಸರದಲ್ಲಿ ನಡೆಸುವ ಸಲುವಾಗಿ ಇದೇ 28ರಂದು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್ಪಿಗಳು, ಡಿಎಚ್ಒ, ಖಜಾನೆ ಅಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದದ ಮೂಲಕ ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ. ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತರು ಸಭೆಯಲ್ಲಿ ಭಾಗವಹಿಸುವರು’ ಎಂದು ಸಚಿವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.