ಶನಿವಾರ, ಅಕ್ಟೋಬರ್ 31, 2020
27 °C

ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಕಾಂಗ್ರೆಸ್ ಮುಖಂಡರ ಸಭೆ ಅರಮನೆ ಮೈದಾನದಲ್ಲಿ ನಡೆಯುತ್ತಿದೆ. 

ರಾಜ್ಯಸಭೆಯ ಕಾಂಗ್ರೆಸ್ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಮಾನಾಥ ರೈ, ಆರ್.ವಿ ದೇಶಪಾಂಡೆ, ಕೆ. ಎಚ್ ಮುನಿಯಪ್ಪ, ಎಚ್ .ಕೆ.ಪಾಟೀಲ, ಡಿ.ಕೆ.ಸುರೇಶ್, ಎಸ್.ಆರ್.ಪಾಟೀಲ ಸೇರಿದಂತೆ ಹಿರಿಯ ನಾಯಕರು ಸಭೆಯಲ್ಲಿದ್ದಾರೆ.

ಪಕ್ಷದ ಹಾಲಿ, ಮಾಜಿ  ಶಾಸಕರು, ಸಂಸದರು, ಪರಿಷತ್ ಸದಸ್ಯರು, ಲೋಕಸಭೆ, ವಿಧಾನಸಭೆ ಪರಾಜಿತ ಅಭ್ಯರ್ಥಿಗಳು ಇದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷರು, ಮುಂಚೂಣಿ ಘಟಕಗಳ ಮುಖಂಡರು ಸೇರಿ  300 ಕ್ಕೂ ಹೆಚ್ಚು ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು