ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: 10 ಸಾವಿರ ದಾಟಿದ ಸಾವಿನ ಸಂಖ್ಯೆ

Last Updated 12 ಅಕ್ಟೋಬರ್ 2020, 21:36 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 70 ಜನ ಸಾವಿಗೀಡಾಗುವುದರೊಂದಿಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 10 ಸಾವಿರ ದಾಟಿದೆ.

ಹೊಸದಾಗಿ 7,606 ಮಂದಿಗೆ ಸೋಂಕು ದೃಢಪಟ್ಟಿದ್ದು, 12,030 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ. ಒಟ್ಟಾರೆ ಸೋಂಕಿತರ ಸಂಖ್ಯೆ 7,17,915ಕ್ಕೆ ತಲುಪಿದ್ದರೆ, 5,92,084 ಜನ ಕೋವಿಡ್‌ನಿಂದ ಮುಕ್ತರಾಗಿದ್ದಾರೆ.ಸದ್ಯ ರಾಜ್ಯದಲ್ಲಿ ಮರಣ ದರ ಶೇ.1.4 ರಷ್ಟಿದ್ದು, ಗುಣಮುಖ ದರ ಶೇ. 82.4 ರಷ್ಟಿದೆ.

ಸಕ್ರಿಯ ಪ್ರಕರಣಗಳ ಪೈಕಿ 1,15,776 ಮಂದಿ ಆಸ್ಪತ್ರೆಗಳಲ್ಲಿ, ಕೋವಿಡ್‌ ಆರೈಕೆ ಕೇಂದ್ರಗಳು ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದು, 928 ಮಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅ.12ರಂದು ರಾಜ್ಯದಲ್ಲಿ 23,564 ಮಂದಿಗೆ ಆ್ಯಂಟಿಜೆನ್‌ ಪರೀಕ್ಷೆ ಮತ್ತು 55,193 ಮಂದಿಗೆ ಆರ್‌ಟಿ–ಪಿಸಿಆರ್ ಪರೀಕ್ಷೆ ಮಾಡಲಾಗಿದ್ದು, ಒಟ್ಟು 78,757 ಮಂದಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಈವರೆಗೆ 60,30,980 ಮಂದಿ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದಾರೆ.

ಜಿಲ್ಲಾವಾರು ಮಾಹಿತಿ:

ರಾಜಧಾನಿಯಲ್ಲಿ ಹೊಸದಾಗಿ 3,498 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದರೆ,ಬೆಳಗಾವಿ 444,ಉಡುಪಿ 317, ಮೈಸೂರಿನಲ್ಲಿ 309, ದಕ್ಷಿಣ ಕನ್ನಡದಲ್ಲಿ 303 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಶಿವಮೊಗ್ಗ, ಬೆಳಗಾವಿ ಹಾಗೂ ಹಾಸನ 300ಕ್ಕೂ ಹೆಚ್ಚು, ತುಮಕೂರು, ಕಲಬುರ್ಗಿ ಹಾಗೂ ದಾವಣಗೆರೆಯಲ್ಲಿ 200ಕ್ಕೂ ಹೆಚ್ಚು, 12 ಜಿಲ್ಲೆಗಳಲ್ಲಿ ನೂರಕ್ಕೂ ಹೆಚ್ಚು ಜನ ಕೊರೊನಾದಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT