ಕೋವಿಡ್–19 ಸಾವಿನ ಪ್ರಮಾಣ ದೇಶಕ್ಕಿಂತ ರಾಜ್ಯದಲ್ಲೇ ಹೆಚ್ಚು: ಎಚ್‌ಕೆ ಪಾಟೀಲ

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್–19 ಸಾವಿನ ಪ್ರಮಾಣ ಏರಿಕೆಯಾಗುತ್ತಿದ್ದು ಈ ಬಗ್ಗೆ ಎಚ್ಚರ ವಹಿಸುವಂತೆ ಕಾಂಗ್ರೆಸ್ ಶಾಸಕ ಎಚ್.ಕೆ. ಪಾಟೀಲ ಅವರು ವೈದ್ಯಕೀಯ ಶಿಕ್ಷಣ ಸಚಿವರಿಗೆ ತಿಳಿಸಿದ್ದಾರೆ.
ಕೋವಿಡ್–19 ಅಂಕಿ–ಅಂಶಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಪಾಟೀಲ, ಕೋವಿಡ್–19ನಿಂದಾಗಿ ರಾಜ್ಯದಲ್ಲಿ ಮೃತಪಡುತ್ತಿರುವವರ ಪ್ರಮಾಣವು ದೇಶಕ್ಕಿಂತಲು ಹೆಚ್ಚಾಗಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ ಪ್ರತಿ ಹತ್ತು ಲಕ್ಷಕ್ಕೆ 83 ಇದೆ. ದೇಶದಲ್ಲಿ ಈ ಪ್ರಮಾಣ 42 ಆಗಿದೆ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ. ಬೆಂಗಳೂರಿನಲ್ಲಿ ಜನವರಿ–ಜುಲೈ ಅವಧಿಯಲ್ಲಿ ಸಾವಿನ ಪ್ರಮಾಣ ಶೇ.32 ರಷ್ಟು ಹೆಚ್ಚಾಗಿದೆ ಎಂಬುದು ನೆನಪಿರಲಿ ಎಂದು ಎಚ್ಚರಿಸಿದ್ದಾರೆ.
ಜೊತೆಗೆ, ಜನರಿಗೆ ಸುಳ್ಳು ಮಾಹಿತಿಗಳನ್ನು ನೀಡಿ ಸಮರ್ಥನೆ ಮಾಡಿಕೊಳ್ಳುವ ಬದಲಾಗಿ, ಆಡಳಿತ ಯಂತ್ರವನ್ನು ಚುರುಕುಗೊಳಿಸಿ ಎಂದು ಆಗ್ರಹಿಸಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವರೇ ಸಾವಿನ ಅಂಕಿ-ಸಂಖ್ಯೆಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ. ಭಾರತದಲ್ಲಿ ಸಾವಿನ ಸಂಖ್ಯೆ ದಶಲಕ್ಷಕ್ಕೆ 42. ಕರ್ನಾಟಕದಲ್ಲಿ ದಶಲಕ್ಷಕ್ಕೆ 83 ಇದೆ. ನೆನಪಿರಲಿ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ ಜನೇವರಿಯಿಂದ ಜುಲೈವರೆಗೆ ಶೇ. 32ರಷ್ಟು ಹೆಚ್ಚಳ ಕಂಡಿದೆ. @BSYBJP @mla_sudhakar
— HK Patil (@HKPatil1953) September 3, 2020
ಸುಳ್ಳು ಮಾಹಿತಿಗಳನ್ನು ಜನರಿಗೆ ನೀಡಿ ಸಮರ್ಥನೆಗಳನ್ನು ಮಾಡಿಕೊಳ್ಳುವ ನಿಮ್ಮ ಪ್ರಯತ್ನ. ಸಂಕಷ್ಟದ ಈ ಕಾಲದಲ್ಲಿ ಆಘಾತಕಾರಿ ಸತ್ಯವಾದ ಮಾಹಿತಿ ಜನರ ಜೊತೆಗೆ ಹಂಚಿಕೊಳ್ಳಿ, ಕೊರತೆಗಳನ್ನು ನೀಗಿಸಲು ಯುದ್ದೋಪಾದಿಯಲ್ಲಿ ಕೆಲಸ ಮಾಡಲು ಆಡಳಿತ ಯಂತ್ರ ಚುರುಕುಗೊಳಿಸಿ. @BSYBJP @mla_sudhakar
— HK Patil (@HKPatil1953) September 3, 2020
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.