ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಮರಣ ಪ್ರಮಾಣ ದರ ಶೇ 3.27ಕ್ಕೆ ಏರಿಕೆ

Last Updated 4 ಅಕ್ಟೋಬರ್ 2021, 16:50 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಮೃತರ ಸಂಖ್ಯೆ ಮತ್ತೆ ಹೆಚ್ಚಿದೆ. ಒಂದು ದಿನದಲ್ಲಿ 13 ಮಂದಿ ಅಸುನೀಗಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ37,832ಕ್ಕೆ ತಲುಪಿದ್ದು, ಮರಣ ಪ್ರಮಾಣ ದರಶೇ 3.27ಕ್ಕೆ ಏರಿಕೆಯಾಗಿದೆ.

ಹೊಸದಾಗಿ ಸೋಂಕಿಗೊಳಗಾದವರ ಸಂಖ್ಯೆ ಗಣನೀಯ ಇಳಿಕೆ ಕಂಡಿದೆ. ಹಿಂದಿನ 24 ಗಂಟೆಗಳಲ್ಲಿ397 ಜನರಲ್ಲಿ ಕೋವಿಡ್‌ ದೃಢಪಟ್ಟಿದೆ. ಹೀಗಾಗಿ ಈವರೆಗಿನ ಸೋಂಕಿತರ ಸಂಖ್ಯೆ29.78 ಲಕ್ಷಕ್ಕೆ ಹೆಚ್ಚಿದೆ. ಕೋವಿಡ್‌ ದೃಢ ಪ್ರಮಾಣವು ಶೇ0.50ರಷ್ಟಿದೆ.

ಕೋವಿಡ್‌ ಪೀಡಿತರ ಪೈಕಿ693 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ29.28 ಮಂದಿಗೆ ಕಾಯಿಲೆ ವಾಸಿಯಾದಂತಾಗಿದೆ. ಸಕ್ರಿಯ ಪ್ರಕರಣಗಳು ಮತ್ತಷ್ಟು ಇಳಿಕೆ ಕಂಡಿವೆ. ಸದ್ಯ11,992 ಜನ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ166 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಕೇರಳಕ್ಕೆ ಹೊಂದಿಕೊಂಡಂತಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ (45), ಕೊಡಗು (25) ಮತ್ತು ಮೈಸೂರಿನಲ್ಲಿ (40) ಹೊಸ ಪ್ರಕರಣಗಳು 50ಕ್ಕಿಂತ ಕಡಿಮೆ ಇವೆ. ಹಾಸನದಲ್ಲಿ 33 ಮಂದಿಗೆ ಕೋವಿಡ್‌ ಇರುವುದು ಖಚಿತಪಟ್ಟಿದೆ. ಚಿಕ್ಕಮಗಳೂರು (16), ಕೋಲಾರ (11), ಮಂಡ್ಯ (11), ಶಿವಮೊಗ್ಗ (12) ಮತ್ತು ಉತ್ತರ ಕನ್ನಡದಲ್ಲೂ (12) ಸೋಂಕಿಗೊಳಗಾದವರ ಸಂಖ್ಯೆ ಕಡಿಮೆಯಾಗಿವೆ. 10 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ. 10 ಜಿಲ್ಲೆಗಳಲ್ಲಿ ಇದು ಒಂದಂಕಿಯಷ್ಟಿದೆ.

ಕೋವಿಡ್‌ನಿಂದಾಗಿ ಬೆಂಗಳೂರಿನಲ್ಲಿ 5 ಮಂದಿ ಅಸುನೀಗಿದ್ದಾರೆ. ದಕ್ಷಿಣ ಕನ್ನಡದಲ್ಲಿ 3 ಮರಣ ಪ್ರಕರಣಗಳು ದಾಖಲಾಗಿವೆ. ಚಿತ್ರದುರ್ಗ, ಮೈಸೂರು, ಶಿವಮೊಗ್ಗ, ತುಮಕೂರು ಹಾಗೂ ಉತ್ತರ ಕನ್ನಡದಲ್ಲಿ ತಲಾ ಒಬ್ಬರು ಮೃತರಾಗಿದ್ದಾರೆ. ಮೃತರ ಪೈಕಿ 11 ಮಂದಿ 50 ವರ್ಷಕ್ಕಿಂತ ಮೇಲ್ಪಟ್ಟವರು. ಕೆಮ್ಮು, ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರು.

ಕೋವಿಡ್‌ ಪರೀಕ್ಷೆಗಳ ಸಂಖ್ಯೆ ಗಣನೀಯವಾಗಿ ಇಳಿದಿದೆ. ಸೋಮವಾರ 78,958 ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT