ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9,746 ಮಂದಿಗೆ ಸೋಂಕು 9,102 ಮಂದಿ ಗುಣಮುಖ

Last Updated 5 ಸೆಪ್ಟೆಂಬರ್ 2020, 17:55 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದಲ್ಲಿ ಶನಿವಾರ 9,746 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರಲ್ಲಿ 9,102 ಮಂದಿ ಗುಣಮುಖರಾಗಿದ್ದಾರೆ. ಇದೇ ಮೊದಲ ಬಾರಿ ಚೇತರಿಸಿಕೊಂಡವರ ಸಂಖ್ಯೆ ಕೂಡ 9 ಸಾವಿರದ ಗಡಿ ದಾಟಿದೆ.

ಸದ್ಯ ರಾಜ್ಯದಲ್ಲಿ ಸೋಂಕು ದೃಢ ಪ್ರಮಾಣ ಶೇ 11.87ರಷ್ಟಿದೆ. ಈ ತಿಂಗಳ ಐದು ದಿನಗಳಲ್ಲಿಯೇ 46,809 ಪ್ರಕರಣಗಳು ವರದಿ
ಯಾಗಿವೆ. ಪ್ರತಿನಿತ್ಯ ಸರಾಸರಿ 9,361 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 3.89 ಲಕ್ಷ ದಾಟಿದೆ.ಕೋವಿಡ್ ಪೀಡಿತರಲ್ಲಿ ಮತ್ತೆ128 ಮಂದಿ ಮೃತಪಟ್ಟಿದ್ದು, ಈವರೆಗೆ ಸೋಂಕಿನಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 6,298ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಅಧಿಕ ಮರಣ ಪ್ರಕರಣಗಳು ವರದಿಯಾದ ರಾಜ್ಯಗಳ ಸಾಲಿನಲ್ಲಿ ಮೂರನೇ ಸ್ಥಾನದಲ್ಲಿರುವ ಕರ್ನಾಟಕ, ಸೋಂಕಿತರು ಹಾಗೂ ಗುಣಮುಖರ ಪಟ್ಟಿಯಲ್ಲಿ ನಾಲ್ಕನೆ ಸ್ಥಾನದಲ್ಲಿದೆ. ಮಹಾರಾಷ್ಟ್ರ ಹಾಗೂ ತಮಿಳುನಾಡು ಮೂರು ವಿಭಾಗಗಳಲ್ಲಿಯೂ ಕ್ರಮವಾಗಿ ಮೊದಲ ಎರಡು ಸ್ಥಾನಗಳಲ್ಲಿವೆ. ರಾಜ್ಯದಲ್ಲಿ ಒಂದೇ ದಿನ 35,530 ಆ್ಯಂಟಿಜೆನ್‌ ಸೇರಿದಂತೆ 76,761 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ ಕೋವಿಡ್ ಪರೀಕ್ಷೆಗೆ ಒಳಪಟ್ಟವರ ಸಂಖ್ಯೆ 32.73 ಲಕ್ಷ ತಲುಪಿದೆ. ರಾಜ್ಯದಲ್ಲಿರುವ 603 ಜ್ವರ ಚಿಕಿತ್ಸಾಲಯಗಳಲ್ಲಿ ಈವರೆಗೆ 24.75 ಲಕ್ಷ ಮಂದಿ ತಪಾಸಣೆ ಮಾಡಿಸಿಕೊಂಡಿದ್ದಾರೆ.

ಸೋಂಕಿತರಲ್ಲಿ ಬೆಂಗಳೂರಿನಲ್ಲಿ ಒಂದು ಲಕ್ಷ ಸೇರಿದಂತೆ ರಾಜ್ಯದಲ್ಲಿ 2.83 ಲಕ್ಷ ಮಂದಿ ಗುಣಮುಖರಾಗಿದ್ದಾರೆ. 99,617 ಸೋಂಕಿರು ಸದ್ಯ ಆಸ್ಪತ್ರೆಗಳು, ಕೋವಿಡ್‌ ಆರೈಕೆ ಕೇಂದ್ರಗಳು ಹಾಗೂ ಮನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ ಹೊಸದಾಗಿ 3,093 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 1.44 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 790 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 21 ಸಾವಿರಕ್ಕೆ ತಲುಪಿದೆ. ಬೆಳಗಾವಿಯಲ್ಲಿ 473 ಮಂದಿ ಸೋಂಕಿತರಾಗಿದ್ದಾರೆ.
ದಾವಣಗೆರೆ (395), ದಕ್ಷಿಣ ಕನ್ನಡ (377), ಬಳ್ಳಾರಿ (366), ಹಾಸನ (347), ಶಿವಮೊಗ್ಗ (346) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ಶನಿವಾರ ದೃಢಪಟ್ಟ ಮರಣ ಪ್ರಕರಣಗಳಲ್ಲಿ 24 ಮಂದಿ 50 ವರ್ಷದೊಳಗಿನವರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT