ಮಂಗಳವಾರ, ಆಗಸ್ಟ್ 9, 2022
23 °C

ಶಿಕ್ಷಣ ಇಲಾಖೆ ಹೆಸರು ಬದಲಾವಣೆ: ‘ಸಾಕ್ಷರತಾ ಇಲಾಖೆ’ ಎಂದು ಮರು ನಾಮಕರಣ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಹೆಸರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂದು ಮರು ನಾಮಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ‘ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯನ್ನು ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರು ನಾಮಕರಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

12ನೇ ತರಗತಿ ವರೆಗಿನ ಶಿಕ್ಷಣವು ಶಾಲಾ ಶಿಕ್ಷಣ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಅಂಶವನ್ನು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ರಲ್ಲಿ ತಿಳಿಸಿರುವ ಹಿನ್ನೆಲೆಯಲ್ಲಿ ಮರುನಾಮಕರಣ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ಹೆಚ್ಚಿನ ರಾಜ್ಯಗಳಲ್ಲಿ ‘ಶಾಲಾ ಶಿಕ್ಷಣ ಇಲಾಖೆ’ ಎನ್ನುವ ಪದನಾಮ ರೂಢಿಯಲ್ಲಿದೆ. ಆದ್ದರಿಂದ, ರಾಜ್ಯದಲ್ಲಿಯೂ ಇದೇ ಮಾದರಿ ಅಳವಡಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಸೂಚಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು