ಬುಧವಾರ, ಜೂನ್ 16, 2021
21 °C

ಆಸ್ತಿ ತೆರಿಗೆ ಪಾವತಿ: ರಿಯಾಯ್ತಿ ಅವಧಿ ಜೂನ್‌ 30ರ ವರೆಗೆ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಸ್ತಿ ತೆರಿಗೆ

ಬೆಂಗಳೂರು: ಬಿಬಿಎಂಪಿ ಹೊರತುಪಡಿಸಿ ಉಳಿದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿ ಮೇಲೆ ನೀಡುತ್ತಿದ್ದ ಶೇ 5ರಷ್ಟು ರಿಯಾಯ್ತಿಯ ಅವಧಿಯನ್ನು ಜೂನ್‌ 30ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಬುಧವಾರ ನಿರ್ದೇಶನ ನೀಡಿದೆ.

ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ತೆರಿಗೆದಾರರು ಬ್ಯಾಂಕ್‌ಗಳಿಗೆ ಭೇಟಿ ನೀಡಿ ಆಸ್ತಿತೆರಿಗೆ ಪಾವತಿಸುವುದು ಕಷ್ಟಸಾಧ್ಯ. ಹಾಗಾಗಿ ರಿಯಾಯಿತಿ ನೀಡುವ ಅವಧಿಯನ್ನು ಜೂನ್‌ 30ರವರೆಗೆ ವಿಸ್ತರಿಸಲಾಗಿದೆ.

ಪ್ರತಿ ಆರ್ಥಿಕ ವರ್ಷದಲ್ಲೂ ಆ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣಪ್ರಮಾಣದಲ್ಲಿ ಏ 30ರ ಒಳಗೆ ಪಾವತಿ ಮಾಡಿದವರಿಗೆ ಶೇ 5 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಈಗಾಗಲೇ ಬಿಬಿಎಂಪಿಯು 2021-22 ನೇ ಸಾಲಿನ ಪೂರ್ತಿ ಆಸ್ತಿ ತೆರಿಗೆಯನ್ನು ಒಮ್ಮೆಲೆ ಪಾವತಿಸುವವರಿಗೆ ಶೇ 5ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ಮೇ 31ರವರೆಗ ವಿಸ್ತರಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು