ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸರ್ಕಾರದಿಂದಲೂ ಪೆಟ್ರೋಲ್‌, ಡೀಸೆಲ್‌ ಲೀ.ಗೆ ₹7 ಇಳಿಕೆ

Last Updated 3 ನವೆಂಬರ್ 2021, 19:33 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್‌ಗೆ ತಲಾ ₹ 7 ತೆರಿಗೆ ಇಳಿಕೆ ಮಾಡಿದೆ.

ಕೇಂದ್ರ ಸರ್ಕಾರದ ಆದೇಶ ಹೊರಬಿದ್ದ ಬಳಿಕ ಟ್ವಿಟರ್‌ನಲ್ಲಿ ಈ ವಿಷಯ ಪ್ರಕಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ರಾಜ್ಯ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು ಪ್ರತಿ ಲೀ.ಗೆ ₹ 7ರಷ್ಟು ಕಡಿಮೆ ಮಾಡಲಿದೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ₹ 2,100 ಕೋಟಿಯಷ್ಟು ಹೊರೆಯಾಗಲಿದೆ’ ಎಂದು ತಿಳಿಸಿದ್ದಾರೆ.

ಗುರುವಾರ ಸಂಜೆಯಿಂದಲೇ ದರ ಇಳಿಕೆ ನಿರ್ಧಾರ ಅನ್ವಯವಾಗಲಿದೆ. ಇದರಿಂದ ರಾಜ್ಯದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ ₹ 95.50 ಮತ್ತು ಪ್ರತಿ ಲೀ. ಡೀಸೆಲ್‌ ದರ ₹ 81.50ಗೆ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT