ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುಲ್ಕ ಪಡೆಯುವ ಸಂಬಂಧ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಲಿ: ಖಾಸಗಿ ಶಾಲಾ ಆಡಳಿತ ಮಂಡಳಿ

Last Updated 13 ಜೂನ್ 2021, 7:31 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್ ಕಾರಣ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಶಾಲಾ ಶುಲ್ಕ ಪಡೆಯುವ ಸಂಬಂಧ ಗೊಂದಲಗಳಿವೆ. ಶಿಕ್ಷಣ ಸಚಿವರು ಕೂಡ ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹೀಗಾಗಿ, ಸರ್ಕಾರ ಈ ಬಗ್ಗೆ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಬೇಕು’ ಎಂದು ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ (ಕ್ಯಾಮ್ಸ್) ಕಾರ್ಯದರ್ಶಿ ಶಶಿಕುಮಾರ್ ಆಗ್ರಹಿಸಿದ್ದಾರೆ.

‘ಹಲವು ಪೋಷಕರು 2-3 ವರ್ಷಗಳಿಂದ ಶಾಲಾ ಶುಲ್ಕ ಪಾವತಿಸಿಲ್ಲ. ಕೋವಿಡ್ ಬಂದ ಬಳಿಕವೂ ತರಗತಿಗಳನ್ನು ನಡೆಸಲಾಗಿದೆ. ಆದರೆ, ವಿದ್ಯಾರ್ಥಿಗಳಿಂದ ಶುಲ್ಕ ಪಡೆಯಲಾಗದೆ, ಖಾಸಗಿ ಶಾಲೆಯವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶುಲ್ಕ ಪಡೆಯದೆ ಖಾಸಗಿ ಶಾಲೆಗಳನ್ನು ನಡೆಸಲು ಸಾಧ್ಯವಿಲ್ಲ. ಹೆಚ್ಚು ಶುಲ್ಕ ಪಡೆಯುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಲಿ. ಅದು ಬಿಟ್ಟು ಶುಲ್ಕವೇ ಪಡೆಯಬೇಡಿ ಎಂದರೆ ಹೇಗೆ’ ಎಂದು ಶಶಿಕುಮಾರ್ ಪ್ರಶ್ನಿಸಿದ್ದಾರೆ.

‘ಕನಿಷ್ಠ ಶುಲ್ಕ ಪಾವತಿಸಿ ಮಕ್ಕಳನ್ನು ಪೋಷಕರು ಶಾಲೆಗಳಲ್ಲಿ ದಾಖಲಿಸಲು ಅವಕಾಶ ನೀಡಿ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ ದಾಖಲಾತಿ ಪ್ರಕ್ರಿಯೆ ನಡೆಸಲು ಕಷ್ಟವಾಗುತ್ತದೆ. ಶಿಕ್ಷಣ ಇಲಾಖೆ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT