ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಹೆಚ್ಚಳ: ಶಾಲೆ, ಚಿತ್ರಮಂದಿರ, ಜಿಮ್‌ಗಳ ಮೇಲೆ ಹೇರಿದ ನಿರ್ಬಂಧಗಳೇನು?

ಹೊಸ ಮಾರ್ಗಸೂಚಿ ಪ್ರಕಟ
Last Updated 2 ಏಪ್ರಿಲ್ 2021, 15:01 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಎರಡನೇ ಅಲೆ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.

ಒಂದು ತಿಂಗಳ ಅವಧಿಯಲ್ಲಿ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ತಜ್ಞರ ಸಲಹೆ ಆಧರಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಸೂಚಿಸಲಾಗಿದೆ. ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಹೊಸ ಮಾರ್ಗಸೂಚಿ ಇಂತಿದೆ....

* 6ರಿಂದ 9ರವರೆಗೆ ವಿದ್ಯಾಗಮ ಸೇರಿದಂತೆ ಎಲ್ಲ ತರಗತಿಗಳು ಸ್ಥಗಿತ. 10,11 ಮತ್ತು 12ನೇ ತರಗತಿಗಳು ಪ್ರಸ್ತುತ ಇರುವಂತೆಯೇ ಮುಂದುವರೆಯುತ್ತವೆ. ಆದಾಗ್ಯೂ, ತರಗತಿಗಳಿಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ.

* ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ತರಗತಿಗಳಲ್ಲಿ ಮಂಡಳಿಯ, ವಿಶ್ವವಿದ್ಯಾಲಯಗಳ ಪರೀಕ್ಷೆ ಬರೆಯುವ ಹಾಗೂ ವೈದ್ಯಕೀಯ ಶಿಕ್ಷಣದ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.

*ಧಾರ್ಮಿಕ ಸ್ಥಳಗಳಲ್ಲಿ ವೈಯಕ್ತಿಕವಾಗಿ ಪ್ರಾರ್ಥನೆ ಮಾಡಲು ಅವಕಾಶವಿರುತ್ತದೆ. ಆದರೆ, ಗುಂಪು ಸೇರುವ ಕಾರ್ಯಕ್ರಮಗಳಿಗೆ ಅವಕಾಶವಿರುವುದಿಲ್ಲ.

*ಎಲ್ಲಾ ಜಿಮ್‌, ಪಾರ್ಟಿಹಾಲ್‌, ಕ್ಲಬ್‌ ಹೌಸ್‌ಗಳು, ಈಜುಕೊಳಗಳು ಮುಚ್ಚಲ್ಪಟ್ಟಿರುತ್ತವೆ.

*ಯಾವುದೇ ತರಹದ ರ್‍ಯಾಲಿಗಳು, ಮುಷ್ಕರ, ಧರಣಿ ಇತ್ಯಾದಿಗಳನ್ನು ನಿಷೇಧಿಸಲಾಗಿದೆ.

* ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಕರ ಸಂಖ್ಯೆಯು ನಿಗಧಿಪಡಿಸಿರುವ ಆಸನದ ವ್ಯವಸ್ಥೆಯನ್ನು ಮೀರುವಂತಿಲ್ಲ.

* ಕಚೇರಿಗಳು ಹಾಗೂ ಇತರ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ನಿರ್ವಹಿಸುವ ವ್ಯವಸ್ಥೆಯನ್ನು ( ವರ್ಕ್‌ ಫ್ರಮ್‌ ಹೋಮ್) ಪಾಲಿಸುವುದು.

*ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಮತ್ತು ಧಾರವಾಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಶೇ.50 ರಷ್ಟು ವೀಕ್ಷಕರಿಗೆ ಮಾತ್ರ ಆಸನಗಳಲ್ಲಿ ಕುಳಿತುಕೊಳ್ಳಲು ಅವಕಾಶ ಕಲ್ಪಿಸುವುದು.

* ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪಬ್‌, ಬಾರ್‌, ಕ್ಲಬ್‌, ರೆಸ್ಟೋರೆಂಟ್‌ಗಳಲ್ಲಿ ಗರಿಷ್ಠ ಗ್ರಾಹಕರ ಸಂಖ್ಯೆಯ ಶೇ.50 ರಷ್ಟು ಮೀರುವಂತಿಲ್ಲ.

* ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು ಮತ್ತು ಜಾತ್ರೆ ಮಹೋತ್ಸವಗಳು, ಮೇಳಗಳು, ಗುಂಪು ಸೇರುವುದರ ನಿಷೇಧ ಮುಂದುವರೆಯುತ್ತದೆ.

*ವಿವಿಧ ಸಭೆ, ಸಮಾರಂಭ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶ ನೀಡಬಹುದಾದ ಸಾರ್ವಜನಿಕರ ಸಂಖ್ಯೆಯನ್ನು ದಿನಾಂಕ 12.3.2021ರಲ್ಲಿರುವ ಸುತ್ತೋಲೆಯಂತೆ ಮುಂದುವರಿಸಿದೆ.

* ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದು ಹಾಗೂ ದೈಹಿಕ ಅಂತರವನ್ನು ಕಾಪಾಡಿಕೊಳ್ಳುವುದು ಇವುಗಳಿಗೆ ಸಂಬಂಧಪಟ್ಟಂತೆ ಈಗಾಗಲೇ ಜಾರಿಯಲ್ಲಿರುವ ನಿಯಮ, ಆದೇಶಗಳನ್ನು ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT