ಬೆಂಗಳೂರು: ಪಿಎಫ್‌ಐ ಮತ್ತು ಅದರ ಸಹವರ್ತಿ ಸಂಘಟನೆಗಳ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವುದರಿಂದ ಅದರ ಅನುಷ್ಠಾನದ ಸಂಪೂರ್ಣ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ನಿಷೇಧದ ನಂತರದ ಪ್ರಕ್ರಿಯೆಗಳಾದ ನಿಷೇಧಕ್ಕೆ ಒಳಪಟ್ಟ ಸಂಘಟನೆಗಳ ಕಚೇರಿಗಳನ್ನು ಜಪ್ತಿ ಮಾಡುವುದು, ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಮತ್ತು ಕಾನೂನು ಕ್ರಮಕೈಗೊಳ್ಳುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರಗಳೇ ನಿರ್ವಹಿಸಲಿವೆ ಎಂದು ಹೇಳಿದ್ದಾರೆ.

ಕೇಂದ್ರದ ನಿರ್ದೇಶನದ ಅನ್ವಯ ರಾಜ್ಯ ಸರ್ಕಾರ ಮುಂದಿನ ಪ್ರಕ್ರಿಯೆಗಳ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿ ಸುತ್ತೋಲೆ ಹೊರಡಿಸಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.