ರಾಯಚೂರು: ಮಸ್ಕಿ ಉಪಚುನಾವಣೆ ಪ್ರಚಾರಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ರಾಜ್ಯ ನಾಯಕರು ಬಂದಿದ್ದು, ಅಬ್ಬರ ಜೋರಾಗಿದೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಪರವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹಾಗೂ ಸ್ಥಳೀಯ ನಾಯಕರು ಪ್ರಚಾರ ಆರಂಭಿಸಿದ್ದಾರೆ.

ಮಸ್ಕಿ ಕ್ಷೇತ್ರ ವ್ಯಾಪ್ತಿಯ ಸಿಂಧನೂರು ತಾಲ್ಲೂಕಿನ ತುರ್ವಿಹಾಳ, ಗುಂಜಳ್ಳಿ, ವಿರೂಪಾಪುರದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ಆಯೋಜಿಸಲಾಗಿದೆ.

ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪರ ಪ್ರಚಾರಕ್ಕೆ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಾಲ್ಕು ದಿನಗಳಿಂದ ವಾಸ್ತವ್ಯ ಹೂಡಿದ್ದು, ಪ್ರತಿದಿನ 10 ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ. ಸೋಮವಾರ ಮತ್ತಷ್ಟು ನಾಯಕರು ಜೊತೆಯಾಗಿದ್ದಾರೆ.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕ ರೇಣುಕಾಚಾರ್ಯ ಆಗಮಿಸಿದ್ದಾರೆ. ಕೊಳಬಾಳ, ಗುಡದೂರ, ಗೌಡನವಾವಿ, ಉದ್ಭಾಳ, ಹಾಲಾಪುರ, ಇರಕಲ್, ತೋರಣದಿನ್ನಿ, ಹಿರೇದಿನ್ನಿ, ಮಲ್ಲದಗುಡ್ಡ, ಉಟಕನೂರು ಗ್ರಾಮಗಳಲ್ಲಿ ಪ್ರಚಾರಸಭೆ ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.