ಬೆಂಗಳೂರು: ರಾಜ್ಯದ ಜನರಿಗೆ ಉಚಿತವಾಗಿ, ಕಾಲಮಿತಿಯೊಳಗೆ, ತಾರತಮ್ಯವಿಲ್ಲದೆ, ಸುಲಭವಾಗಿ ನಿಲುಕುವಂತೆ ಕೋವಿಡ್ ಲಸಿಕೆಗಳನ್ನು ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದ್ದ ಪ್ರತಿಭಟನೆಗೆ ರಾಜ್ಯದಾದ್ಯಂತಬೆಂಬಲವ್ಯಕ್ತವಾಗಿದೆ.

ಗುರುವಾರ ಬೆಳಿಗ್ಗೆ 9.10 ಗಂಟೆಯಿಂದ ಆರಂಭಗೊಂಡ ಪ್ರತಿಭಟನೆ ಗ್ರಾಮೀಣ ಭಾಗದಲ್ಲಿ ಹೆಚ್ಚು ನಡೆದಿದೆ. ಈ ಪ್ರತಿಭಟನೆಯಲ್ಲಿ ಮಕ್ಕಳು, ವೃದ್ಧರೂ ಸೇರಿದಂತೆ ಎಲ್ಲ ವಯೋಮಾನದ ಜನರೂ ಭಾಗವಹಿಸಿದ್ದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆದಿದ್ದು, ಎಲ್ಲ ಭಾಗಗಳಲ್ಲೂ ಅತ್ಯುತ್ಸಾಹದ ಪ್ರತಿಕ್ರಿಯೆ ಕಂಡುಬಂದಿದೆ. ಹಲವಾರು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ, ತಾಲ್ಲೂಕುಗಳಲ್ಲಿ ತಹಸೀಲ್ದಾರ್ ಕಚೇರಿಗಳ ಮುಂದೆ ಪ್ರತಿಭಟನೆಗಳು ನಡೆದಿವೆ. ಇದಲ್ಲದೆ ಕರವೇ ಕಾರ್ಯಕರ್ತರು ಜಿಲ್ಲಾ, ತಾಲ್ಲೂಕು, ಗ್ರಾಮಪಂಚಾಯ್ತಿ ಕಚೇರಿಗಳು, ನಾಡಕಚೇರಿಗಳು, ವಿವಿಧ ಸರ್ಕಾರಿ ಕಚೇರಿಗಳ ಮುಂದೆಯೂ ಪ್ರತಿಭಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.