ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 43 ಲಕ್ಷ ಮಕ್ಕಳಿಗೆ ಲಸಿಕೆ: ಸಚಿವ ಡಾ.ಕೆ. ಸುಧಾಕರ್‌

Last Updated 26 ಡಿಸೆಂಬರ್ 2021, 17:15 IST
ಅಕ್ಷರ ಗಾತ್ರ

ಬೆಂಗಳೂರು: 15 ರಿಂದ 18 ವರ್ಷ ವಯೋಮಾನದ 43 ಲಕ್ಷ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಅಭಿಯಾನ ಜನವರಿ 3ರಿಂದ ರಾಜ್ಯದಲ್ಲಿ ಆರಂಭವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

ಕೋವಿಡ್‌ ನಿಯಂತ್ರಣ ಕುರಿತು ಭಾನುವಾರ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘15ರಿಂದ 18 ವರ್ಷದ 43 ಲಕ್ಷ ಮಕ್ಕಳು ರಾಜ್ಯದಲ್ಲಿದ್ದಾರೆ. ಎಲ್ಲರಿಗೂ ಲಸಿಕೆ ನೀಡಲಾಗುವುದು. ಅದಕ್ಕೆ ಪೂರಕವಾದ ಸಿದ್ಧತೆಗಳನ್ನು ಆರಂಭಿಸಲಾಗಿದೆ’ ಎಂದರು.

60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರು, ತೀವ್ರ ಸ್ವರೂಪದ ಕಾಯಿಲೆಗಳಿಂದ ಬಳಲುತ್ತಿರುವವರು, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಕೋವಿಡ್‌ ನಿಯಂತ್ರಣದಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ಬೂಸ್ಟರ್ ಡೋಸ್‌ ನೀಡುವ ಅಭಿಯಾನ ಜ.10 ರಿಂದ ಆರಂಭವಾಗಲಿದೆ. ಬೂಸ್ಟರ್‌ ಡೋಸ್‌ ಕೊಡುವುದಕ್ಕೂ ತಯಾರಿ ನಡೆಸಲಾಗುತ್ತಿದೆ ಎಂದು ಹೇಳಿದರು.

ಉಪಕರಣ ಖರೀದಿಗೆ ಒಪ್ಪಿಗೆ: ಓಮೈಕ್ರಾನ್‌ ತಳಿಯ ಕೊರೊನಾ ವೈರಾಣು ಸೋಂಕು ಪತ್ತೆಮಾಡಲು ‘ಥರ್ಮೀ ಫಿಶರ್‌’ ಎಂಬ ಉಪಕರಣಗಳನ್ನು ಖರೀದಿಸಲು ಉನ್ನತಮಟ್ಟದ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT